ಮಣಿಪಾಲ ವೇಶ್ಯಾವಾಟಿಕೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಪಶ್ಚಿಮ ಬಂಗಾಳದಲ್ಲಿ ಬಂಧನ – vishwanews24
ಮಣಿಪಾಲ ವೇಶ್ಯಾವಾಟಿಕೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಪಶ್ಚಿಮ ಬಂಗಾಳದಲ್ಲಿ ಬಂಧನ
ಮಣಿಪಾಲ: ವೇಶ್ಯಾವಾಟಿಕೆ ನಡೆಸಲು ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ನಗರಕ್ಕೆ ಪೂರೈಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಳೆದ 1 ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಪಿಂಪ್‌ಗಳನ್ನು ಮಣಿಪಾಲ ಠಾಣೆ ಪೊಲೀಸರು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯಲ್ಲಿ ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಕಾಳಿಧಾಮ್ ಕಾಲೋನಿ ಪಿಎಸ್ ಡಮ್‌ಡಮ್ ನಿವಾಸಿ ಎಸ್ತಾರ್ ಶಾಹ ಯಾನೆ ಕಾಜಲ್ (40) ಹಾಗೂ ಅರಬಿಂದಾ ಸರಾನಿ ಕಾಲಿಧಾಮ್ ಕಾಲೋನಿಯ ಸಂಜಯ (49) ಬಂಧಿತ ಆರೋಪಿಗಳು.
ಮಂಗಳೂರು: ಮಂತ್ರದೇವತೆ ಸನ್ನಿಧಿ ಶ್ರೀ ಕ್ಷೇತ್ರ ಮಂದಾರಬೈಲು ನ.14ರಂದು ದೀಪಾಲಂಕಾರ ಸೇವೆ : Vishwanews24
2025ರಲ್ಲಿ ಆರೋಪಿಗಳು ನಗರಕ್ಕೆ ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ಕರೆಯಂದು ಇಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಅಂದು ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯರನ್ನು ರಕ್ಷಿಸಿದ್ದು, ಈ ವೇಳೆ ಪಿಂಪ್‌ಗಳಿಬ್ಬರು ಪರಾರಿಯಾಗಿದ್ದರು. ಆರೋಪಿಗಳ ಬಗ್ಗೆ ಕುರುಹು ಸಿಗುತ್ತಿದ್ದಂತೇ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ರಚನೆಯಾದ ತಂಡವು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯ ನೇತಾಜಿ ನಗರಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳನ್ನು ಉಡುಪಿಯ ಎರಡನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಪೊಲೀಸರು, ಹೆಚ್ಚಿನ ತನಿಖೆಗೆ ಆರೋಪಿಗಳನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
