ಮತ್ತೆ ಕರ್ನಾಟಕಕ್ಕೆ ಪ್ರಧಾನಿ :  ಮಾ.17ರಂದು ಚಿಕ್ಕಬಳ್ಳಾಪುರಕ್ಕೆ – Vishwanews24

Featured, ರಾಜ್ಯ ನ್ಯೂಸ್

ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಆಗಮನ :  ಮಾ.17ರಂದು ಚಿಕ್ಕಬಳ್ಳಾಪುರಕ್ಕೆ

ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲೇ, ಇಂದು ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹವಾ ಜೋರಾಗಿದೆ. ಈ ಬೆನ್ನಲ್ಲೇ ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಮಾರ್ಚ್ 17ರಂದು ಆಗಮಿಸಲಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, 1 ಕೋಟಿ ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಮಾರ್ಚ್ 17ರಂದು ಇಟ್ಟುಕೊಳ್ಳಲಾಗಿದೆ. ಅಂದು ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದರು.

ಕುಂದಾನಗರಿಯತ್ತ ಪ್ರಧಾನಿ ಪ್ರಯಾಣ  : ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮನ ; ಬೃಹತ್ ರೋಡ್ ಶೋ – Vishwanews24

ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಭೇಟಿ ನೀಡುವುದು ಬಹುತೇಕ ಖಚಿತವಾಗಿದೆ. ಅಂದೇ ಚಿಕ್ಕಬಳ್ಳಾಪುರದಲ್ಲಿ 22 ಸಾವಿರ ಉಚಿತ ನಿವೇಶದ ಹಕ್ಕು ಪತ್ರಗಳನ್ನು ಕೂಡ ವಿತರಣೆ ಮಾಡಲಾಗುತ್ತದೆ. ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಉದ್ಘಾಟನೆ ಕೂಡ ಮಾಡಲಿದ್ದಾರೆ. ಮಾರ್ಚ್ 17ರಂದು ಮೂರು ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ ಎಂದರು.

ಮೈಸೂರು :  ನಾಮಕರಣ ಶಾಸ್ತ್ರಕ್ಕೆ ಡೆಕೋರೇಟ್‌ ಮಾಡಿದ್ದ ಗ್ಯಾಸ್‌ ಬಲೂನ್‌ ಸ್ಪೋಟ : ಅಪಾಯದಿಂದ ಮಗು, ವ್ಯಕ್ತಿ ಪಾರು  – Vishwanews24

 

Leave a Reply