ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ : ಅನಿತಾ ಕುಮಾರಸ್ವಾಮಿ ಸ್ಪಷ್ಟನೆ – Vishwanews24

Featured, ರಾಜ್ಯ ನ್ಯೂಸ್

ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ : ಅನಿತಾ ಕುಮಾರಸ್ವಾಮಿ ಸ್ಪಷ್ಟನೆ 

ಬೆಂಗಳೂರು : ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ.

ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತೊಮ್ಮೆ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಮನಗರ ಕ್ಷೇತ್ರವನ್ನು ಈಗಾಗಲೇ ನನ್ನ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಃ ಸ್ಪರ್ಧಿಸುವ ಮಾತೆಲ್ಲಿ? ಎಂದು ಕೇಳಿದ್ದಾರೆ. 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆ ನಡೆದಾಗ ಪಕ್ಷ ಮತ್ತು ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರ ಆದೇಶಕ್ಕೆ ಗೌರವ ಕೊಟ್ಟು ಮಧುಗಿರಿಯಲ್ಲಿ ನನಗೆ ಇಷ್ಟವಿಲ್ಲದಿದ್ದರೂ ಸ್ಪರ್ಧಿಸಿದ್ದೆ.

ಮಂಗಳೂರು: ಹಳಿಗೆ ಬಿದ್ದ ಮರ – ಕೆಂಪು ವಸ್ತ್ರ ಹಿಡಿದು ರೈಲು ಅವಘಡ ತಪ್ಪಿಸಿದ ಮಹಿಳೆ – Vishwanews24

Leave a Reply