ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ
ಉಡುಪಿ:ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.
ಬಂಧಿತ ಆರೋಪಿಗಳಾದ ಉತ್ತರಾಖಂಡದ ಅಜಯ್ ಅಲಿಯಾಸ್ ಅನ್ಮೋಲ್ ರಸ್ತೋಗಿ ಮತ್ತು ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಅವರನ್ನು ಈ ಹಿಂದೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು, ಅವರನ್ನು ಪ್ರಕರಣದ ತನಿಖಾಧಿಕಾರಿ ಕಾಪು ಪೊಲೀಸ್ ಇನ್ಸ್ಪೆಕ್ಟರ್ ಅಜ್ಮತ್ ಅಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹೆಚ್ಚಿನ ವಿಚಾರಣೆ ಮತ್ತು ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಧೀಶ ಪುರುಷೋತ್ತಮ್ ಅವರನ್ನು ಕೋರಿದ್ದರು. ಮನವಿಗೆ ಸಮ್ಮತಿಸಿದ ನ್ಯಾಯಾಧೀಶರು ಇಬ್ಬರನ್ನೂ 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ಟೈಮಿಂಗ್ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ – vishwanews24
