ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ – vishwanews24
ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ
ಉಡುಪಿ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ವಿಮಾನ ಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಕೆಲವು ಸೂಚನೆಗಳನ್ನು ನೀಡಿದೆ.
ವೈಮಾನಿಕ ನಿರ್ಬಂಧ ಮತ್ತು ಕೊಲ್ಲಿ ಪ್ರದೇಶದ ಪ್ರಚಲಿತ ಸ್ಥಿತಿಗತಿಯಂದ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿಕೊಳ್ಳುವಂತಾಗಿದೆ.
ಇದನ್ನೂ ಓದಿ 👇:
ಉಡುಪಿ ಕಂಬಳಕ್ಕೆ ನನ್ನ ಅಭ್ಯಂತರವಿಲ್ಲ , ಆದರೆ ಅದು ಬಿಜೆಪಿ ಕಂಬಳ ಆಗಬಾರದು : ವಿನಯಕುಮಾರ್ ಸೊರಕೆ – vishwanews24
ಜಿಲ್ಲಾಡಳಿತದ ಕ್ರಮಗಳು: ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದ್ದು, ಮಾಹಿತಿಗಳನ್ನು ಹಂಚಿಕೊಳ್ಳಲಿದೆ.
ಉಡುಪಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಉಡುಪಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ:0820-2574802 (1077-ಟೋಲ್ ಫ್ರೀ), ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ದೂ.ಸಂಖ್ಯೆ: 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದಾಗಿದೆ.
ಇದನ್ನೂ ಓದಿ 👇:
ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿ ರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿ ಅಥವಾ ಸಾರಥಿ ಸಹಾಯತಾ (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು.
ವೀಸಾಗೆ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
