ಮನೆ ಮನೆಗೆ ತೆರಳಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಅಬ್ದುಲ್ ರಹೀಂ ಪೊಲೀಸರ ಬಲೆಗೆ -vishwanews24
ಕುಂದಾಪುರ: ದನದ ಮಾಂಸವನ್ನು ಮನೆ ಮನೆಗೆ ತೆರಳಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗಂಗೊಳ್ಳಿ ಮೀನು ಮಾರ್ಕೆಟ್ ಸಮೀಪದ ನಿವಾಸಿ ಅಬ್ದುಲ್ ರಹೀಂ (30) ಎಂದು ಗುರುತಿಸಲಾಗಿದೆ.
ಆರೋಪಿ ಅಬ್ದುಲ್ ರಹೀಂ ಮನೆ-ಮನೆಗೆ ತೆರಳಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಗಂಗೊಳ್ಳಿ ಠಾಣಾಧಿಕಾರಿ ಭೀಮಾ ಶಂಕರ ಸಿನ್ನೂರ ಸಂಗಣ್ಣ ನೇತೃತ್ವದ ತಂಡ ಬಂಧಿಸಿ, ಆತನಿಂದ 4 ಕೆಜಿ ದನದ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
