ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

Featured, ಉಡುಪಿ

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ

ಮಲ್ಪೆ: ಮಲ್ಪೆಯ ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಮಲ್ಪೆ ಬೀಚ್‌ನಲ್ಲಿ ಜಲಸಾಹಸ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿದೆ.

ಮುಂಗಾರು ಮಳೆಗಾಲದ ಅವಧಿಯಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವುದರಿಂದ ಪ್ರವಾಸಿಗರ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಹಾರ್ಬರ್ ಕ್ರಾಫ್ಟ್ ನಿಯಮ 1963ರ ಅನ್ವಯ ಈ 4 ತಿಂಗಳ ಅವಧಿಯನ್ನು ಪ್ರತಿಕೂಲ ಋತು ಎಂದು ಘೋಷಿಸಲಾಗಿದ್ದು, ದ್ವೀಪಕ್ಕೆ ತೆರಳುವ ಬೋಟ್ ಸಂಚಾರ ಹಾಗೂ ಬೀಚ್‌ನಲ್ಲಿನ ಎಲ್ಲಾ ಸಾಹಸಿಕ ಆಟಗಳನ್ನು ಸ್ಥಗಿತಗೊಳಿಸಲಾಗುತ್ತದೆ.

ಇದನ್ನೂ ಓದಿ: 

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

Leave a Reply