‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು : ಮುಖ್ಯಮಂತ್ರಿ BSY -Vishwanews24
ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು : ಮುಖ್ಯಮಂತ್ರಿ BSY -Vishwanews24
ಬೆಂಗಳೂರು: ‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು. ಗಾಂಧೀಜಿ ಸ್ವಾವಲಂಬನೆ ಜೀವನ ತೋರಿಸಿಕೊಟ್ಟವರು. ದೇಶವನ್ನು ರಾಜಕೀಯ ದಾಸ್ಯದಿಂದ ಮುಕ್ತಿಗೊಳಿಸಿದವರು. ಅವರು ಪ್ರತಿಪಾದಿಸಿದ ಸಿದ್ಧಾಂತ ಪಾಲಿಸುವುದೇ ನಮ್ಮ ಜೀವನದ ಗುರಿಯಾಗಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶಿಸಿದರು.
ಅತ್ತೂರು : ಫೆ. 14ರಂದು ಪರ್ಪಲೆಗಿರಿಯಲ್ಲಿ ಕಲ್ಕುಡ ಕಲ್ಲುರ್ಟಿ ತೂಕತ್ತರಿ ದೈವಗಳ ನೇಮೋತ್ಸವ -Vishwanews24
ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಶನಿವಾರ ಎರಡು ನಿಮಿಷಗಳ ಕಾಲ ಮೌನಾಚರಣೆ ಬಳಿಕ ಅವರು ಮಾತನಾಡಿದರು.
‘ದೇಶದಾದ್ಯಂತ ಇಂದು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡಿಕೊಳ್ಳುವ ಕಾರ್ಯಕ್ರಮ. ನಮ್ಮೆಲ್ಲ ಸಚಿವರು ಸೇರಿ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಭಾವನೆಗಳನ್ನು ವ್ಯಕ್ತಪಡಿಸಿದ್ದೇವೆ’ ಎಂದರು.
ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಂದಾಯ ಸಚಿವ ಆರ್. ಅಶೋಕ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಂಗಳೂರು: ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ 73ನೇ ಪುಣ್ಯ ತಿಥಿ ಕಾರ್ಯಕ್ರಮ -Vishwanews24
