ಮಹಾರಾಷ್ಟ್ರ : ಜನವರಿ 5 ರವರೆಗೆ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ -Vishwanews24
ಮಹಾರಾಷ್ಟ್ರ : ಜನವರಿ 5 ರವರೆಗೆ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ -Vishwanews24
ಮುಂಬೈ: ಇಂಗ್ಲೆಂಡ್ ನಲ್ಲಿ ಕೊರೋನಾ ಹೊಸ ರೂಪ ತಾಳಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ನಿರ್ಧರಿಸಿದೆ.
ನಾಳೆಯಿಂದ ರಾಜ್ಯದ ಎಲ್ಲ ನಗರಸಭೆ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ಜನವರಿ 5ರವರೆಗೆ ನೈಟ್ ಕರ್ಫ್ಯೂ ಘೋಷಣೆ ಮಾಡಿದೆ. ರಾತ್ರಿ 11ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಯುಕೆ ಯಿಂದ ಇಳಿಯುವವರಿಗೆ, ಸಂಬಂಧಪಟ್ಟ ವಿಮಾನ ನಿಲ್ದಾಣಗಳಿಗೆ ಆಗಮಿಸಿದಾಗ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಮಹಾರಾಷ್ಟ್ರವು ಭಾರತದಲ್ಲಿ ಅತಿ ಹೆಚ್ಚು ಕೊರೋನಾ ಪೀಡಿತ ರಾಜ್ಯವಾಗಿದ್ದು, ಸುಮಾರು 19 ಲಕ್ಷ COVID-19 ಪ್ರಕರಣಗಳಿವೆ. ಮತ್ತು 48,000 ಕ್ಕೂ ಹೆಚ್ಚು ಸಾವುಗಳು ದಾಖಲಾಗಿವೆ. ಆದಾಗ್ಯೂ, ಕಳೆದ ಎರಡು ವಾರಗಳಲ್ಲಿ ಸೋಂಕು ಇಳಿಕೆ ಹಾದಿಯಲ್ಲಿ ಸಾಗಿದೆ. ಕೊರೋನಾ ನಿಯಂತ್ರಣಕ್ಕೆ ಮಹಾರಾಷ್ಟ್ರ ಸರ್ಕಾರ ಮಾಸ್ಕ್ ಕಡ್ಡಾಯ ಮಾಡಿ ಆದೇಶ ನೀಡಿತ್ತು.
