ಮಹಾರಾಷ್ಟ್ರ:: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… vishwanews24
ಮಹಾರಾಷ್ಟ್ರ:: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಬಗ್ಗೆ ಇನ್ನೂ ಸಸ್ಪೆನ್ಸ್
ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನ ಸಭೆ ಚುನಾವಣೆಯಲ್ಲಿ ಮಹಾಯುತಿಯ ಅಮೋಘ ವಿಜಯದ ಬಳಿಕ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲದ ನಡುವೆ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಅವರೊಂದಿಗೆ ಮಂಗಳವಾರ ಬೆಳಿಗ್ಗೆ ರಾಜಭವನಕ್ಕೆ ತೆರಳಿದ ಶಿವಸೇನೆ ಮುಖ್ಯಸ್ಥ ಶಿಂದೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
VIDEO | Maharashtra CM Eknath Shinde (@mieknathshinde) submits his resignation to Governor CP Radhakrishnan at Raj Bhavan in Mumbai.#MaharashtraNews
(Full video available on PTI Videos – https://t.co/n147TvrpG7) pic.twitter.com/MSIbsNw1cb
— Press Trust of India (@PTI_News) November 26, 2024
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್ಸಿಪಿಯ ಮಹಾಮೈತ್ರಿಕೂಟವು ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು ಇದಾದ ಬಳಿಕ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶೆ ಎದ್ದಿತ್ತು ಇದರ ನಡುವೆ ದೇವೇಂದ್ರ ಫಡ್ನವಿಸ್ ಅವರ ಹೆಸರೂ ಮುಂಚೂಣಿಯಲ್ಲಿದ್ದು ಮೈತ್ರಿಕೂಟದಲ್ಲೂ ಇದಕ್ಕೆ ಸಹಮತವಿತ್ತು ಎನ್ನಲಾಗಿದೆ ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿ ಎನ್ನಲಾಗಿತ್ತು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಆರು ಯಕ್ಷಗಾನ ಮೇಳಗಳ ತಿರುಗಾಟ ಆರಂಭ – vishwanews24
