ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ : ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ -Vishwanews24

Featured, ರಾಷ್ಟ್ರ ನ್ಯೂಸ್

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ : ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ -Vishwanews24

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಉಲ್ಪಣವಾಗುತ್ತಿದ್ದು, ಇದು ಸಿಎಂ ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮುಂದಿನ 8 ರಿಂದ 15 ದಿನಗಳ ಕಾಲ ಹೊಸ ಸೋಂಕು ಪ್ರಕರಣಗಳು ಹೀಗೆಯೇ ಮುಂದುವರಿದರೆ ಲಾಕ್​ಡೌನ್​ ಘೋಷಣೆ ಮಾಡುವ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಉದ್ಧವ್​ ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ಹೇರುವ ಕುರಿತು ನಡೆದ ಸಭೆಯಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಉದ್ಧವ್ ಠಾಕ್ರೆ, ‘ಮಹಾರಾಷ್ಟ್ರದ ಕೊವಿಡ್ ಪರಿಸ್ಥಿತಿ ಗಂಭೀರವಾಗಿದೆ. ದೈನಂದಿನ ಅಂಕಿ ಅಂಶಗಳ ಪ್ರಸ್ತುತ ಏರಿಕೆ ಆತಂಕ ಮೂಡಿಸಿದೆ. ಇದು ಸೋಂಕಿನ ಹೊಸ ಅಲೆಯೇ ಎಂದು ಕಂಡುಹಿಡಿಯಲು ಒಂದೆರಡು ವಾರಗಳು ಬೇಕು. ಮತ್ತೊಂದು ಲಾಕ್​​ಡೌನ್ ತಪ್ಪಿಸಲು ಜನರು ಕೊರೊನಾ ವೈರಸ್ ನಿಯಂತ್ರಣ ಶಿಷ್ಟಾಚಾರಗಳನ್ನು ಅನುಸರಿಸಬೇಕೆಂದು ಅವರು ಎಚ್ಚರಿಸಿದರು.

ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್‌ ಅಟ್ಟಹಾಸ : ಕರೋನ ನೆಗೆಟಿವ್‌ ವರದಿಯೊಂದಿಗೆ ಮಾತ್ರ ಕರ್ನಾಟಕ ಎಂಟ್ರಿ -Vishwanews24

ಇದೇ ವಿಚಾರವಾಗಿ ಮಾತನಾಡಿದ್ದ ಮುಂಬೈ ಮೇಯರ್​ ಕಿಶೋರಿ ಪಡ್ನೇಕರ್, ಕೊರೊನಾ ಸೋಂಕು ನಿಯಂತ್ರಣಕ್ಕೆ ಸಾಕಷ್ಟು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಕೊವಿಡ್​ ನಿಯಮದನ್ವಯ, ಮಾಸ್ಕ್​ ಹಾಕುವುದು ಕಡ್ಡಾಯವಾದರೆ, ಗುಂಪು ಸೇರುವುದರ ಮೇಲೆ ನಿಷೇಧ ಹೇರಲಾಗಿದೆ. ಆದಾಗ್ಯೂ, ಜನರು ನಿಯಮವನ್ನು ಪಾಲನೆ ಮಾಡುತ್ತಿಲ್ಲ. ಹೀಗಾಗಿ, ಕಟ್ಟುನಿಟ್ಟಾಗಿ ಕೊರೊನಾ ನಿಯಮ ಪಾಲನೆ ಸೂಚಿಸಲಾಗಿದೆ. ನೀವು ಕೊವಿಡ್​ ನಿಯಮ ಪಾಲನೆ ಮಾಡದೆ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚುತ್ತಾ ಹೋದರೆ ಲಾಕ್​ಡೌನ್​ ಘೋಷಣೆ ಮಾಡಬೇಕಾಗುತ್ತದೆ. ಇದನ್ನು ತಪ್ಪಿಸಬೇಕಾದರೆ ನೀವು ನಿಯಮ ಪಾಲನೆ ಮಾಡಿ ಎಂದು ಹೇಳಿದ್ದರು