ಮಹಾರಾಷ್ಟ್ರದಲ್ಲಿ ನಕ್ಸಲರ ಅಟ್ಟಹಾಸ : ದಾಳಿಕೋರರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಪ್ರಧಾನಿ ಮೋದಿ -Vishwanews24
ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದ ಮಾವೋವಾದಿಗಳ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೀವ್ರವಾಗಿ ಖಂಡಿಸಿದ್ದಾರೆ.
ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಕ್ಸಲರು ಐಇಡಿ ಬಳಸಿ ಸ್ಫೋಟಿಸಿದ್ದು, 16 ಮಂದಿ ನಕ್ಸಲ್ ನಿಗ್ರಹ ದಳದ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಗಡ್ಚಿರೋಲಿ ಜಿಲ್ಲೆಯ ಕುರ್ಖೇಡಾನಲ್ಲಿ ಈ ಕೃತ್ಯ ನಡೆದಿದೆ. ಸಿ-60 ಪೊಲೀಸರ ತಂಡ ಕುರ್ಖೆಡಾಕ್ಕೆ ವಾಹನದಲ್ಲಿ ತೆರಳುತ್ತಿದ್ದಾಗ ಐಇಡಿ ಬಳಸಿ ಸ್ಫೋಟಿಸಿದ್ದಾರೆ. 15 ಮಂದಿ ಪೊಲೀಸರ ಜೊತೆ ಡ್ರೈವರ್ ಈ ದಾಳಿಗೆ ಬಲಿಯಾಗಿದ್ದಾರೆ.
ಕುರ್ಖೇದ-ಕೊರ್ಚಿ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಭಯೋತ್ಪಾದನ ನಿಗ್ರಹ ದಳ ವಾಹನವನ್ನು ಗುರಿಯಾಗಿರಿಸಿಕೊಂಡು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ ಪರಿಣಾಮ 16 ಮಂಡಿ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಗಡ್ಚಿರೋಲಿಯಲ್ಲಿ ನಮ್ಮ ಭದ್ರತಾ ಪಡೆ ಸಿಬ್ಬಂದಿ ಮೇಲೆ ನಡೆಸಿದ ದಾಳಿಯನ್ನು ಹೇಯಕೃತ್ಯವೆಂದು ಭಾವಿಸುತ್ತೇನೆ. ಹುತಾತ್ಮರ ತ್ಯಾಗವನ್ನು ಮರೆಯುವುದಿಲ್ಲ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಈ ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Strongly condemn the despicable attack on our security personnel in Gadchiroli, Maharashtra. I salute all the brave personnel. Their sacrifices will never be forgotten. My thoughts & solidarity are with the bereaved families. The perpetrators of such violence will not be spared.
— Narendra Modi (@narendramodi) May 1, 2019
