ಮಹಿಳೆ ಅಪಹರಣ ಪ್ರಕರಣ : ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು – vishwanews24
ಮಹಿಳೆ ಅಪಹರಣ ಪ್ರಕರಣ : ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು
ಬೆಂಗಳೂರು: ಕೆ.ಆರ್. ನಗರ ಮಹಿಳೆ ಅಪಹರಣ ಪ್ರಕರಣದ ಆರೋಪ ಎದುರಿಸುತ್ತಿದ್ದ ಭವಾನಿ ರೇವಣ್ಣಗೆ ಕೊನೆಗೂ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠವು, ಭವಾನಿ ಅವರು ಮೈಸೂರು ಮತ್ತು ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿದೆ.
