ಮಾ.30 ರಂದು ಮಂಗಳೂರಿಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ ಭೇಟಿ – Vishwanews24
ಮಾ.30 ರಂದು ಮಂಗಳೂರಿಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ ಭೇಟಿ
ಮಂಗಳೂರು: ದಿನಾಂಕ 30-03-2022ರಂದು ಬುಧವಾರ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ ಮೊಹಮ್ಮದ್ ಹಾರಿಸ್ ನಲಪಾಡ್ ರವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿಲಿದ್ದಾರೆ ಎಂದು ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುನೀಲ್ ಪೂಜಾರಿ ಸೋಮವಾರ ನಗರ ಪ್ರಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ತಿಳಿಸಿದರು.
ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ ಮೊಹಮ್ಮದ್ ಹಾರಿಸ್ ನಲಪಾಡ್ ರವರು 30-03-2022ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸಿ ಜಿಲ್ಲೆಯಲ್ಲಿ ನಡೆಯುವ ಯುವ ಕಾಂಗ್ರೆಸ್ ನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 6 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿಸಿದರು.
ಮೊಹಮ್ಮದ್ ಹಾರಿಸ್ ನಲಪಾಡ್ ರವರು ರಾಜ್ಯಾಧ್ಯಕ್ಷರಾದ ಬಳಿಕ ಮೊದಲನೆ ಬಾರಿಗೆ ಜಿಲ್ಲೆಗೆ ಆಗಮಿಸಲಿರುವ ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಭವ್ಯವಾಗಿ ಸ್ವಾಗತಿಸಲಾಗುವುದು. ಮಧ್ಯಾಹ್ನ 12 ಗಂಟೆಗೆ ಮಂಗಳೂರು ನಗರದ ಸೈಂಟ್ ಸೆಬಾಸ್ಟಿಯನ್ ಹಾಲ್ ಬೆಂದೂರ್ ಮಂಗಳೂರು ಇಲ್ಲಿ ನಡೆಯುವ ಯುವ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.
ತುಮಕೂರು: 25ರ ಯುವತಿ ಜೊತೆ ವಿವಾಹವಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆಗೆ ಶರಣು – VIshwanews24
ಜಿಲ್ಲಾ ಯುವ ಕಾಂಗ್ರೆಸ್ ಗೆ ನೂತನವಾಗಿ ಆಯ್ಕೆಯಾದ ಎಲ್ಲಾ ಸದಸ್ಯರುಗಳಿಗೆ ಆದೇಶ ಪತ್ರವನ್ನು ಈ ಸಂದರ್ಭದಲ್ಲಿ ನೀಡಲಾಗುವುದು. ಬಳಿಕ ಮಧ್ಯಾಹ್ನ 2 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿರುವರು. ಅನಂತರ 2.30 ಕ್ಕೆ ಮಂಗಳೂರಿನಿಂದ ಪುತ್ತೂರಿಗೆ ಪ್ರಯಾಣಿಸಲಿದ್ದಾರೆ.
ಸಂಜೆ 3.30 ಕ್ಕೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಾಣ ಗುರು ಸಭಾ ಭವನದಲ್ಲಿ ಆಯೋಜಿಸಿದ “ಯುವ ಧ್ವನಿ” ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು. ಈ ಎಲ್ಲಾ ಕಾರ್ಯಕ್ರಮದಲ್ಲಿ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಎಲ್ಲಾ ನಾಯಕರುಗಳು, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು, ರಾಜ್ಯ ಯುವ ಕಾಂಗ್ರೆಸ್ ನಾಯಕರುಗಳು ಹಾಗೂ ಎಲ್ಲಾ ಬ್ಲಾಕ್ ನ ಯುವ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಾಕೇಶ್ ದೇವಾಡಿಗ, ಸುರತ್ಕಲ್ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಜೈಸನ್ ಸುರತ್ಕಲ್, ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಮೊಹಮ್ಮದ್ ಮುಫೀದ್, ಶೇಖ್ ಕೈಫ್ ಉಪಸ್ಥಿತರಿದ್ದರು.
