ಮಾಜಿ ಡಿಸಿಎಂ ಡಾ.ಪರಮೇಶ್ವರ್ ಪಿಎ ರಮೇಶ್ ಆತ್ಮಹತ್ಯೆ -Vishwanews24
ತುಮಕೂರು : ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಮನೆ ಹಾಗೂ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಪರಮೇಶ್ವರ್ ಅವರ ಪರಮಾಪ್ತ ಹಾಗೂ ಪಿಎ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ ಐಟಿ ದಾಳಿಗೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಪರಮೇಶ್ವರ್ ಅವರನ್ನು ಭೇಟಿಯಾಗಿದ್ದ ಪಿಎ ರಮೇಶ್ ಅವರು ಬಳಿಕ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಞಾನಭಾರತಿ ಯುನಿವರ್ಸಿಟಿ ಕ್ಯಾಂಪಸ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
