ಮಾಜಿ ಸಿಎಂ ಸದನಾಂದ ಗೌಡ ಬ್ಯಾಂಕ್‌ ಖಾತೆ ಹ್ಯಾಕ್‌ : 3 ಲಕ್ಷ ದೋಚಿದ ಸೈಬರ್‌ ಕಳ್ಳರು – vishwanews24

Featured, ರಾಜ್ಯ ನ್ಯೂಸ್

ಮಾಜಿ ಸಿಎಂ ಸದನಾಂದ ಗೌಡ ಬ್ಯಾಂಕ್‌ ಖಾತೆ ಹ್ಯಾಕ್‌ : 3 ಲಕ್ಷ ದೋಚಿದ ಸೈಬರ್‌ ಕಳ್ಳರು

ಬೆಂಗಳೂರು: ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್‌ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್‌ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ  75 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ 75 ಪೌರ ಕಾರ್ಮಿಕರರಿಗೆ ಆರ್‌ಎಂವಿ ಎಕ್ಸ್ ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಡಿವಿಎಸ್‌ ಮಾಧ್ಯಮಗಳ ಜೊತೆ ಮಾತನಾಡಿ, ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ.ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ತಿಳಿಸಿದರು.

ಹಿಂದೂ ಸಮಾಜ ಒಡೆಯುವುದೇ ಕಾಂಗ್ರೆಸ್‌ ಸರ್ಕಾರದ ಮುಖ್ಯ ಅಜೆಂಡ  : ಕೆ.ಎಸ್.ಈಶ್ವರಪ್ಪ – vishwanews24

ಹೆಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.

Leave a Reply