ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ – vishwanews24

Featured, ರಾಜ್ಯ ನ್ಯೂಸ್

ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರಿಗೆ ಬಜೆಟ್ ಮಂಡನೆಯ ಬಗ್ಗೆ ಮಾಹಿತಿ ನೀಡಿದರು.

ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್​ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ತಿಳಿಸಿದರು.

ಉಡುಪಿ : ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ನೀಡಿ ಸಹಕರಿಸುವಂತೆ ಎಸ್ಪಿಗೆ ಯಶ್ ಪಾಲ್ ಮನವಿ – vishwanews24

Leave a Reply