ಮೀನುಗಾರರ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಸರ್ಕಾರದಿಂದ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ : ಸಚಿವ ಅಂಗಾರ -Vishwanews24
ಮೀನುಗಾರರ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಸರ್ಕಾರದಿಂದ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ : ಸಚಿವ ಅಂಗಾರ -Vishwanews24
ಮಂಗಳೂರು : ಸರ್ಕಾರ ಮೀನುಗಾರರ ಕಲ್ಯಾಣ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮೀನುಗಾರರು ಇವುಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಚಿವ ಎಸ್. ಅಂಗಾರ ತಿಳಿಸಿದರು.
ಅವರು ಮಂಗಳೂರು ಬಂದರಿನ ಮತ್ಸ್ಯಗಂಧಿ ಸಭಾಂಗಣದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾದ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮಂಗಳೂರು :ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನೋಂದಣಿ ಶಿಬಿರಕ್ಕೆ ಚಾಲನೆ -Vishwanews24
ಜಿಲ್ಲೆಯಲ್ಲಿ ನಾಡದೋಣಿಗಳ ಜೆಟ್ಟಿಗಳು ಹಾಗೂ ಬಂದರಿನ ಹೂಳೆತ್ತುವ ಕಾರ್ಯಗಳು ಹೆಚ್ಚಾಗಿ ನಡೆಯಬೇಕು ಹಾಗೂ ಬಂದರುಗಳಲ್ಲಿ ಜೆಟ್ಟಿಗಳ ವಿಸ್ತರಣೆಯಾಗಬೇಕು. ಜೊತೆಗೆ ಮೀನುಗಾರರ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಸರ್ಕಾರದಿಂದ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು.
ಮೀನುಗಾರಿಕೆ ಉತ್ಪಾದಕರ ಸಂಸ್ಥೆ ಕುರಿತ ಮಾಹಿತಿ ಶಿಬಿರದಿಂದ ಹೆಚ್ಚಿನ ಮೀನುಗಾರರು ಇದರ ಉಪಯೋಗ ಪಡೆಯಬೇಕು ಎಂದ ಅವರು, ಸುಮಾರು 100 ಕ್ಕೂ ಹೆಚ್ಚಿನ ಸಂಖ್ಯೆಯ ಮೀನುಕೃಷಿಕರು, ಮೀನುಗಾರರು ಈ ರೀತಿಯ ಸಂಸ್ಥೆಗಳನ್ನು ಮಾಡಿಕೊಳ್ಳುವುದರಿಂದ ಮೀನುಗಾರರ ಹಲವು ಸಂಕಷ್ಟಗಳಿಗೆ ಪರಿಹಾರ ಸಿಗುತ್ತದೆ. ಮುಖ್ಯವಾಗಿ ಅವರ ಉತ್ಪನ್ನಗಳಿಗೆ ಉತ್ತಮ ಬೆಲೆ, ಸೂಕ್ತ ಮಾರುಕಟ್ಟೆ ಸಿಗುತ್ತದೆ ಎಂದರು.
ಜೆಡಿಎಸ್ ಶಕ್ತಿ ಪ್ರದರ್ಶಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ : HDK -Vishwanews24
ಮೀನುಗಾರಿಕೆಯಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಹಾಗೂ ಮೀನುಗಾರಿಕೆಯ ಉನ್ನತಿಗಾಗಿ ಸರ್ಕಾರದಿಂದ ನೀಡಲಾಗುವ ಆರ್ಥಿಕ ಸಹಾಯಧನ, ಕಾರ್ಯಕ್ರಮಗಳು ಯೋಜನೆಗಳು ಸೇರಿದಂತೆ ಬ್ಯಾಂಕ್ಗಳಲ್ಲಿ ಸಿಗುವ ಸೌಲಭ್ಯವನ್ನು ಮೀನು ಉತ್ಪಾದಕರ ಸಂಸ್ಥೆ ಮೂಲಕ ಸುಲಭವಾಗಿ ಪಡೆದುಕೊಳ್ಳಬಹುದು ಎಂದರು. ಸರ್ಕಾರದಿಂದ ಸಿಗುವ ಅನುದಾನದಲ್ಲಿ ಮೀನುಗಾರರ ಸುರಕ್ಷತೆಗೆ ಆದ್ಯತೆ ನೀಡಲಾಗುವುದು ಎಂದರು.
ಈಗಾಗಲೇ ಬಂದರಿನಲ್ಲಿ ಕೈಗೊಳ್ಳಲಾಗಿರುವ ಡ್ರೆಜ್ಜಿಂಗ್ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೋಟು ತಂಗಲು ಹಾಗೂ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಹಲವು ಕಷ್ಟಗಳನ್ನು ಪರಿಹರಿಸಲು ಮೀನುಗಾರರು ಮನವಿ ಮಾಡಿದ್ದಾರೆ. ಸರ್ಕಾರದಿಂದ ಮೀನುಗಾರರ ಕಷ್ಟಗಳನ್ನು ಪರಿಹರಿಸಲು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.
ಮಂಗಳೂರು: ಲಂಚ ಸ್ವೀಕರಿಸುತ್ತಿರುವಾಗಲೇ ಸಹಾಯಕ ಭೂ ನಿರ್ದೇಶಕ ಅಧಿಕಾರಿ ಎಸಿಬಿ ಬಲೆಗೆ -Vishwanews24
ಕಾರ್ಯಕ್ರಮದಲ್ಲಿ ಕೆ.ಎಫ್.ಡಿ.ಸಿ ಯ ಅಧ್ಯಕ್ಷ ನಿತೀನ್ ಕುಮಾರ್, ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ದೊಡ್ಮಣಿ, ಮಹಾನಗರ ಪಾಲಿಕೆಯ ಸದಸ್ಯ ಅಬ್ದುಲ್ ಲತೀಫ್, ಭಾಸ್ಕರ ಚಂದ್ರ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

