ಮುಂದಿನ ದಿನಗಳಲ್ಲಿ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗಲಿದೆ : ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ -Vishwanews24

Featured, ರಾಜ್ಯ ನ್ಯೂಸ್

ಕೊಪ್ಪಳ: ಮುಂದಿನ ದಿನಗಳಲ್ಲಿ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗಲಿದೆ. ರಾಜ್ಯ ಸರ್ಕಾರ ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಪ್ರಸ್ತುತ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರ ಚರ್ಚೆಯಲ್ಲಿದೆ. ಸಾವರ್ಕರ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನ ಮುಡಿಪಾಗಿಟ್ಟು ಹೋರಾಡಿದ್ದಾರೆ. ಜೈಲುವಾಸ ಅನುಭವಿಸಿದ್ದಾರೆ. ಅಂತವರನ್ನ ಹೀಯಾಳಿಸಿದರೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದಂತಾಗಲಿದೆ. ಸಿದ್ದಗಂಗಾ ಶ್ರೀಗಳಿಗೂ ಭಾರತ ರತ್ನ ಬರುತ್ತದೆ. ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ.

ಪಶ್ಚಿಮ ಮಹಾರಾಷ್ಟ್ರದ ಐದು ಜಿಲ್ಲೆಗಳ ಉಸ್ತುವಾರಿ ನನಗಿದೆ. ಅಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಹಿಂದಿನ ವಾತಾವರಣ ಸಂಪೂರ್ಣ ಬದಲಾಗಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. 288 ಸ್ಥಾನಕ್ಕೆ 220 ಸ್ಥಾನ ಬಿಜೆಪಿ ಗೆಲ್ಲಲಿದೆ ಎಂದರು.