ಮುಂದಿನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಸೇರುವ ನಿರ್ಧಾರ ಕೈಗೊಂಡಿರುವೆ : ಸಿ.ಎಚ್.ವಿಜಯ್ ಶಂಕರ್ -Vishwanews24

Featured, ರಾಜ್ಯ ನ್ಯೂಸ್

ಮೈಸೂರುಮುಂದಿನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಸೇರುವ ನಿರ್ಧಾರ ಕೈಗೊಂಡಿರುವೆ ಎಂದು ಮಾಜಿ ಸಂಸದ ಸಿಎಚ್.ವಿಜ ಯ್ ಶಂಕರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಅರ್ಜುನ ಅವಧೂತರನ್ನು ಭೇಟಿ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಗೆ ಹಾಗೂ ರಾಜ್ಯಕ್ಕೆ ನಿಮ್ಮಿಂದ ಅನೇಕ ಕಾರ್ಯಗಳು ಆಗಬೇಕಿದೆ. ಹೀಗಾಗಿ ನೀವು ರಾಜಕೀಯದಲ್ಲಿ ಮುಂದುವರಿಯಬೇಕು ಎಂದು ಅವಧೂತರು ಆಶೀರ್ವಾ ದ ಮಾಡಿದ್ದಾರೆ. ಅವರ ಸಲಹೆಯಂತೆ ಮುಂದಿನ ನಿರ್ಧಾರಗಳನ್ನು ಕೈಗೊಳ್ಳುತ್ತೇನೆ. ಅವರ ಹಾರೈಕೆಯಲ್ಲಿ ನಂಬಿಕೆ ಇದೆ. ಒಂದೆರಡು ದಿನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಮರಳಿ ಪಕ್ಷಕ್ಕೆ ಸೇರುತ್ತಿದ್ದೇನೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದ ವಿಜಯ್ ಶಂಕರ್ ಅವರು ಬಿಜೆಪಿ ನಾಯಕ ಪ್ರತಾಪ್ ಸಿಂಹ ವಿರುದ್ಧ ಸೋಲನುಭವಿಸಿದ್ದರು.