ಮುಂದಿನ ವರ್ಷದಿಂದ SSLC ಗ್ರೇಸ್ ಮಾರ್ಕ್ಸ್ ರದ್ದತಿಗೆ ಸಿಎಂ ಸಿದ್ಧರಾಮಯ್ಯ ಆದೇಶ – vishwanews24

Featured, ರಾಜ್ಯ ನ್ಯೂಸ್

ಮುಂದಿನ ವರ್ಷದಿಂದ SSLC ಗ್ರೇಸ್ ಮಾರ್ಕ್ಸ್ ರದ್ದತಿಗೆ ಸಿಎಂ ಸಿದ್ಧರಾಮಯ್ಯ ಆದೇಶ

ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ನೀಡುತ್ತಿರುವಂತ ಗ್ರೇಸ್ ಮಾರ್ಕ್ ಅನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಚರ್ಚೆ ನಡೆಯಿತು.

KSRTC ಬಸ್ ಕಿಟಕಿಯಿಂದ ಉಗಳುವ ಭರದಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆಯ ತಲೆ – Vishwanews24

ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಯಾವ ಕಾರಣ ಮತ್ತು ಉದ್ದೇಶದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ? ಗ್ರೇಸ್ ಮಾರ್ಕ್ಸ್ ನೀಡಲು ಯಾರು ಹೇಳಿದ್ದು ಎಂಬುದಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಡಿಸಿಎಂ ಮಾತಿಗೆ ಸಿಎಂ ಸಿದ್ಧರಾಮಯ್ಯ ಕೂಡ ಸಹಮತ ವ್ಯಕ್ತ ಪಡಿಸಿದರು.

ಸಿಎಂ ಸಿದ್ಧರಾಮಯ್ಯ ಮುಂದಿನ ವರ್ಷದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ನೀಡುತ್ತಿರುವಂತ ಗ್ರೇಸ್ ಮಾರ್ಕ್ಸ್ ರದ್ದು ಮಾಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಿದರು.

ಮಗುವನ್ನು ಕಾರಿನಲ್ಲೆ ಮರೆತು ಮದುವೆಗೆ ಹೋದ ದಂಪತಿ  ; ಉಸಿರುಗಟ್ಟಿ ಮಗು ಸಾವು – vishwanews24

Leave a Reply