ಮುಂದಿನ ಸಲ ಚುನಾವಣೆಯಲ್ಲಿ ಮೋದಿ ಹೆಸರು ಹೇಳಿದರೆ ಬಾಯಲ್ಲಿ ಬೂಟು ಹಾಕ್ತೀವಿ :ಪ್ರಮೋದ್ ಮುತಾಲಿಕ್‌ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಕಲಬುರಗಿ: ರಾಷ್ಟ್ರೀಯ ಹಿಂದು ಸೇನಾದ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಬಿಜೆಪಿ‌ ಸಂಸದರ ವಿರುದ್ಧ ಹರಿಹಾಯ್ದಿದ್ದು, ನಾಲಿಗೆ ಹರಿಬಿಟ್ಟಿರುವ ವಿಡಿಯೋ ಇದೀಗ ವೈರಲ್‌ ಆಗಿದೆ.

ವಿರಾಟ ಹಿಂದು ಮಹಾಸಮಾವೇಶದಲ್ಲಿ ಮಾತನಾಡಿರುವ ಮುತಾಲಿಕ್, ಮುಂದಿನ ಸಲ ಮೋದಿ ಹೆಸರು ಹೇಳಿದ್ರೆ ಬಾಯಲ್ಲಿ ಬೂಟು ಹಾಕ್ತೇವಿ ಎಂದು ಬಿಜೆಪಿ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಅವರು ಜುಲೈ 1ರಂದು ವಿರಾಟ್ ಹಿಂದೂ ಮಹಾಸಮಾವೇಶ ಕಾರ್ಯಕ್ರಮದಲ್ಲಿ ಮುತಾಲಿಕ್ ಅವರು ಈ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಿಂದುತ್ವ ನೋಡಿ ಈ ಬಾರಿ ನಿಮಗೆ ವೋಟ್ ಹಾಕಿದ್ದೇವೆ. ಐದು ವರ್ಷ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ. ಮುಂದಿನ ಸಲ ಚುನಾವಣೆಯಲ್ಲಿ ಮೋದಿ ಹೆಸರು ಹೇಳಿದರೆ ಬಾಯಲ್ಲಿ ಬೂಟು ಹಾಕ್ತೀವಿ ಎಂದು ವಾಗ್ದಾಳಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.