ಮುಂದೊಂದು ದಿನ ಮೋದಿಯವರು ಈ ದೇಶವನ್ನೇ ಮಾರಿ ಬಿಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ – vishwanews24
ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಅನ್ನು ನಿಂದಿಸುವುದು ಬಿಟ್ಟರೆ ಯಾವುದಕ್ಕೂ ಉತ್ತವಿಲ್ಲ : ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಅಹಮದಾಬಾದ್: ದೇಶದ ಆರ್ಥಿಕತೆಯಲ್ಲಿ ಏಕಸ್ವಾಮ್ಯವನ್ನು ಸ್ಥಾಪಿಸಲಾಗುತ್ತಿದ್ದು, ಸಾರ್ವಜನಿಕ ಆಸ್ತಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗುತ್ತಿದೆ. ಮುಂದೊಂದು ದಿನ ಈ ದೇಶವನ್ನೇ ಮಾರಿ ಬಿಡುತ್ತಾರೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ಅಹಮದಾಬಾದ್ನಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜನವಿರೋಧಿ ನೀತಿಯ ಸಿದ್ರಾಮಣ್ಣ ಸರಕಾರ ಪತನಕ್ಕಾಗಿ ಈ ಆಕ್ರೋಶ ಯಾತ್ರೆ : ನಳಿನ್ ಕುಮಾರ್ ಕಟೀಲ್ – vishwanews24
ದೇಶದ ಆರ್ಥಿಕತೆಯಲ್ಲಿ ಏಕಸ್ವಾಮ್ಯವನ್ನು ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕ ಆಸ್ತಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇಡಬ್ಲ್ಯೂಎಸ್) ಮೀಸಲಾತಿಗೆ ಹೊಡೆತ ಬಿದ್ದಿದೆ. ಉದ್ಯೋಗ ಒದಗಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಹೀಗಾಗಿ ಸಾರ್ವಜನಿಕ ವಲಯವನ್ನು ಒಂದೊಂದಾಗಿ ಮಾರಾಟ ಮಾಡುತ್ತಿದ್ದಾರೆ. ಈ ಮೂಲಕ ಅವರ ಸ್ನೇಹಿತರಿಗೆ ಸಹಾಯ ಮಾಡುತ್ತಿದ್ದಾರೆ. ಈ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಮುಂದೊಂದು ದಿನ ಮೋದಿಯವರು ಈ ದೇಶವನ್ನೇ ಮಾರಿ ಬಿಡುತ್ತಾರೆಂದು ಕಿಡಿಕಾರಿದರು,
ಪಂಡಿತ್ ಜವಾಹರಲಾಲ್ ನೆಹರು ನಿರ್ಮಿಸಿದ ಸಾರ್ವಜನಿಕ ವಲಯದ ಕಾರ್ಖಾನೆಗಳನ್ನು ಮೋದಿ ಮುಗಿಸುತ್ತಿದ್ದಾರೆ. ಈ ದೇಶದ ಭವಿಷ್ಯದ ಪೀಳಿಗೆಗೆ ನಾವೇನನ್ನು ನೀಡುತ್ತಿದ್ದೇವೆ? ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಅನ್ನು ನಿಂದಿಸುವುದನ್ನು ಬಿಟ್ಟರೆ ಮೋದಿಯವರ ಬಳಿ ಯಾವುದಕ್ಕೂ ಉತ್ತವಿಲ್ಲ ಎಂದು ಹೇಳಿದರು.
ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ ; ಇಂದು, ನಾಳೆ ಎಲ್ಲೋ ಅಲರ್ಟ್ – vishwanews24
