ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ವಕೀಲ ಮೋಹನ್ ಲಿಂಬಿಕಾಯಿ ನೇಮಕ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ವಕೀಲ ಮೋಹನ್ ಲಿಂಬಿಕಾಯಿ ಅವರನ್ನು ನೇಮಕ ಮಾಡಲಾಗಿದೆ.

ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಗೋಕುಲ ರಸ್ತೆ ನಿವಾಸಿ ಮೋಹನ ಆ.ಲಿಂಬಿಕಾಯಿ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶದಲ್ಲಿ ತಿಳಿಸಿದೆ. ಲಿಂಬಿಕಾಯಿ ಅವರು ಬಿ.ಎಸ್.ಯಡಿಯೂರಪ್ಪ, ಕೆಜೆಪಿ ಪಕ್ಷಕ್ಕೆ ಹೋಗಿದ್ದಾಗ ಬಿಜೆಪಿ ತೊರೆದು ಕೆಜೆಪಿಗೆ ಹೋಗಿದ್ದರು. ಬಳಿಕ ಅವರು ಬಿಜೆಪಿಗೆ ಮರಳಿದ್ದರು. ಪಶ್ಚಿಮ ಪದವೀಧರ ಕ್ಷೇತ್ರದಿಂದ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾಗಿ ಅವರು ಸೇವೆ ಸಲ್ಲಿಸಿದ್ದರು.