ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ನಿಷೇಧ : ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ – Vishwanews24

Featured, ರಾಜ್ಯ ನ್ಯೂಸ್

ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ನಿಷೇಧ : ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ

ಬೆಂಗಳೂರು: ಮುಜುರಾಯಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ ಪ್ರಕಟಿಸಿದೆ.

ಈ ಹಿಂದೆ ತಮಿಳುನಾಡಿನಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿತ್ತು. ಇದೀಗ ಕರ್ನಾಟಕದ ದೇವಾಲಯಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಮೊಬೈಲ್ ಬಳಕೆ ನಿಷೇಧದ ಬಗ್ಗೆ ಈ ಹಿಂದೆ ಕೂಡ ಸಾಕಷ್ಟು ಚರ್ಚೆ ನಡೆದಿದ್ದವು, ಈಗ ಅಧಿಕೃತವಾಗಿ ಮೊಬೈಲ್‌ ಫೋನ್‌ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧಹೇರಿ ಆದೇಶ ಪ್ರಕಟಿಸಿದೆ.

ಪಡುಬಿದ್ರಿ: ಟಿಪ್ಪರ್‌‌ನ ಹಿಂಬದಿಗೆ ಸಿಲುಕಿದ ಕಾರು – ಕಿಲೋಮೀಟರ್ ದೂರ  ಕಾರನ್ನು ಎಳೆದೊಯ್ದ ಟಿಪ್ಪರ್ ..Vishwanews24

ಇತ್ತೀಚಿನ ದಿನಗಳಲ್ಲಿ ದೇವಾಲಯಗಳ ಆವರಣದಲ್ಲಿ ಮೊಬೈಲ್ ಫೋನ್ ಬಳಕೆ ಮಿತಿ ಮೀರಿದೆ. ಭಕ್ತರು ದೇವಾಲಯದ ಒಳಗೆ ಪ್ರವೇಶಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಮಾಡಲು ತೊಂದರೆಯಾಗುತ್ತಿದೆ. ಹೀಗಾಗಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಬಳಸಬಾರದು, ಸ್ವಿಚ್‌ ಆಫ್ ಮಾಡಿ, ದೇವರ ದರ್ಶನ ಪಡೆಯಬೇಕು ಎಂದು ಸೂಚಿಸಲಾಗಿದೆ.

ಯಾರೇ ತಪ್ಪು ಮಾಡಿದರೂ ಕಾನೂನಿನ ಮೂಲಕ ಪಾಠ ಕಲಿಸಲು ಸರ್ಕಾರ ಸಿದ್ಧ: ರಮಾನಾಥ ರೈ – Vishwanews24

Leave a Reply