ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಇಡಿ ನೋಟಿಸ್ – vishwanews24
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್ನ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.
ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದರು.
ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ – vishwanews24
ನೋಟಿಸ್ನಲ್ಲಿ ಏನಿದೆ?
ಜ 9ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಜನವರಿ 3ರಂದು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೊದಲ ನೋಟಿಸ್ ನೀಡಿತ್ತು. ನೋಟಿಸ್ಗೆ ಪ್ರತಿಯಾಗಿ ಸಿಎಂ ಪತ್ನಿ ಪಾರ್ವತಿ ದಾಖಲೆ ಸಂಗ್ರಹಿಸಲು ಎರಡು ವಾರ ಕಾಲಾವಕಾಶ ಕೋರಿದ್ದರು. ವಯಸ್ಸಾಗಿರುವುದರಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದರು. ಇಡಿ ಸಿಎಂ ಪತ್ನಿಗೆ ಎರಡನೇ ನೋಟಿಸ್ ನೀಡಿತ್ತು. ಜನವರಿ 28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಹೇಳಲಾಗಿದೆ.
ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ : ಆರ್.ಅಶೋಕ್ – vishwanews24
