ಮುಸ್ಲಿಂ ಬಾಂಧವರಿಗೆ ‘ರಂಜಾನ್’ ಶುಭಾಶಯ ಕೋರಿದ ಸಿಎಂ – Vishwanews24
ರಾಜ್ಯಾದ್ಯಂತ ರಂಜಾನ್ ಆಚರಣೆ – ಮುಸ್ಲಿಂ ಬಾಂಧವರಿಗೆ ಶುಭಕೋರಿದ ಸಿಎಂ
ಮುಸ್ಲಿಂ ಬಾಂಧವರಿಗೆ ‘ರಂಜಾನ್’ ಶುಭಾಶಯ ಕೋರಿದ ಸಿಎಂ
ಬೆಂಗಳೂರು: ಹಿಂದೂಗಳ ಹೊಸ ವರ್ಷ ಎಂದೇ ಕರೆಯಲ್ಪಡುವ ಯುಗಾದಿಹಬ್ಬ ಮುಗಿಯುತ್ತಿದ್ದಂತೆ ಮುಸ್ಲಿಮರ ಪವಿತ್ರ ಆಚರಿಸಲಾಗುತ್ತಿದೆ. ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ (ಚಂದ್ರ ದರ್ಶನ) ಕಾಣಿಸಿಕೊಂಡಿದ್ದು, ಮರುದಿನವೇ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಬಾಂಧವರಿಗೆ ಶುಭ ಕೋರಿದ್ದಾರೆ.
ಶ್ರದ್ಧಾ ಭಕ್ತಿಯ ಪ್ರತೀಕವಾದ ರಂಜಾನ್ ಹಬ್ಬವು ನಾಡಿನಲ್ಲಿ ಸುಖ, ಶಾಂತಿ, ಸೌಹಾರ್ದತೆಯು ನೆಲೆಗೊಳ್ಳಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು ಎಂದು ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಶುಭಕೋರಿದ್ದಾರೆ.
