ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR – vishwanews24
ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR
ಚಿಕ್ಕಮಗಳೂರು: ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ದೂರು ನೀಡಿದ ದೂರಿನಂತೆ ಮಾಜಿ ಸಚಿವರ ವಿರುದ್ಧ ಪ್ರಕರಣ ದಾಖಲಾಗಿದೆ.
‘ಬಿಪಿಎಲ್ ಪಡಿತರ ಚೀಟಿ’ ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ : ಸಚಿವ ಕೆ.ಎಚ್.ಮುನಿಯಪ್ಪ – vishwanews24
ಜು.23ರಂದು ಸಂಜೆ ಚಿಕ್ಕಮಗಳೂರಿನ ಆಝಾದ್ ಪಾರ್ಕ್ ನಲ್ಲಿ ‘ಯೂತ್ ಫಾರ್ ನೇಷನ್’ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸಿ.ಟಿ. ರವಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಸಿಎಎ-ಎನ್ಆರ್ಸಿ ಹಾಗೂ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆಗಳ ಕುರಿತು ವಾಗ್ದಾಳಿ ನಡೆಸಿದ್ದರು. ಈ ವೇಳೆ ಮುಸ್ಲಿಮ್ ಸಮುದಾಯವನ್ನು ಉದ್ದೇಶಿಸಿ ನೀಟ್ ಪರೀಕ್ಷೆಗೂ ಹಾಗೂ ಮುಲ್ಲಾಗಳಿಗೂ ಏನು ಸಂಬಂಧ?, ಅವರ ಎದೆ ಸೀಳಿದರೆ ಮೂರು ಅಕ್ಷರವೂ ಇಲ್ಲ ಎಂದು ನೀಡಿದ್ದ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಬಿತ್ತರಗೊಂಡಿತ್ತು. ಈ ನಿಂದನಾತ್ಮಕ, ಪ್ರಚೋದನಕಾರಿ ಭಾಷಣವು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಎರಡು ಸಮುದಾಯಗಳ ನಡುವೆ ದ್ವೇಷ ಹಾಗೂ ಅಶಾಂತಿ ಹಬ್ಬಿಸುವಂತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಮಂಗಳೂರು:ಕೇಂದ್ರ ಸರಕಾರದ ವೈಫಲ್ಯದಿಂದ ವಿದ್ಯಾರ್ಥಿಗಳು ಬೀದಿಗೆ: ಪದ್ಮರಾಜ್ – vishwanews24
ಈ ದೂರಿನನ್ವಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
