ಮೂಡುಬಿದಿರೆ: ಮೆದುಳು ಜ್ವರ – ವಿದ್ಯಾರ್ಥಿನಿ ಮೃತ್ಯು – Vishwanews24

Featured, ದಕ್ಷಿಣ ಕನ್ನಡ

ಮೂಡುಬಿದಿರೆ: ಮೆದುಳು ಜ್ವರ – ವಿದ್ಯಾರ್ಥಿನಿ ಮೃತ್ಯು

ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತ್ಯು.

ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ ಮೌಂಟ್‌ ಕಾರ್ಮೆಲ್‌ ಹೈಸ್ಕೂಲ್ ನಲ್ಲಿ ನ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು.

ಸ್ವಸ್ತಿ ಅವರು ತ್ರೋಬಾಲ್ ಆಟಗಾರ್ತಿಯಾಗಿದ್ದು, ಉತ್ತಮ ನೃತ್ಯಪಟುವೂ ಆಗಿದ್ದರು. ತಂದೆ ಸತೀಶ್ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ. ಮೂಲತಃ ವಾಲ್ಪಾಡಿಯವರಾದ ಇವರು ಸದ್ಯ ಮೂಡುಬಿದಿರೆಯಲ್ಲಿ ವಾಸಿಸುತ್ತಿದ್ದಾರೆ.

Leave a Reply