ಮೂಡುಬಿದಿರೆ : ಸಹೋದರಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಯುವಕ  – vishwanews24

Featured, ದಕ್ಷಿಣ ಕನ್ನಡ

ಮೂಡುಬಿದಿರೆ : ಸಹೋದರಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಯುವಕ 

ಮೂಡುಬಿದಿರೆ : ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಯುವಕನೋರ್ವ ತನ್ನ ಅಕ್ಕನೊಂದಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ ಅಬುಸಾಲಿ ಇಸ್ಮಾಯಿಲ್ ಎಂಬವರ ಪುತ್ರ ಸಯ್ಯದ್ ಅನ್ವರ್ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ಬೆಳುವಾಯಿಯಲ್ಲಿ ಕಳೆದ ಕೆಲವು ಸಮಯದಿಂದ ಇಸ್ಮಾಯಿಲ್ ಎಂಬವರ ಬಾಡಿಗೆ ಮನೆಯಲ್ಲಿ ಪತ್ನಿ, ಮಗುವಿನೊಂದಿಗೆ ವಾಸವಾಗಿದ್ದ ಅನ್ವರ್ ಮತ್ತು ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತೆನ್ನಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ :

ರೈಲ್ವೆಯಿಂದ ಬ್ಯಾಂಕ್‌ ಸೇವೆಗಳ ವರೆಗೆ ಹೊಸ ನಿಯಮ : ಇಂದಿನಿಂದ ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿಗೆ  – vishwanews24

ಮೀನಿನ ಟೆಂಪೋದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅನ್ವರ್ ಕಳೆದ ಕೆಲವು ಸಮಯದಿಂದ ಕೆಲಸವಿಲ್ಲದೆ ಮನೆಯಲ್ಲಿದ್ದು, ಒಂದೆರಡು ದಿನಗಳ ಹಿಂದೆ ಬೆಂಗಳೂರಿಗೆ ಹೋಗಿ ಬಂದಿದ್ದಾರೆ. ಗುರುವಾರ ಮತ್ತೆ ಪತಿ-ಪತ್ನಿ ನಡುವೆ ಜಗಳವಾಗಿದ್ದು, ಪತ್ನಿ ತನ್ನ ಎರಡು ವರ್ಷದ ಪುತ್ರನೊಂದಿಗೆ ತವರು ಮನೆಗೆ ತೆರಳಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ತನ್ನ ಅಕ್ಕನಿಗೆ ವೀಡಿಯೊ ಕರೆ ಮಾಡಿ, ಪತ್ನಿ ಮನೆಯವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆನ್ನಲಾಗಿದೆ. ಆತಂಕಕ್ಕೊಳಗಾದ ಮನೆಯವರು ಬಾಡಿಗೆ ಮನೆ ಬಳಿ ಬಂದಾಗ ಆಗಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ಇದನ್ನೂ ಓದಿ :

ನಿಂದಿಸಿದವರನ್ನು ಕ್ಷಮಿಸಲು ಬಯಸುತ್ತೇನೆ; ವಿದ್ಯಾರ್ಥಿಗಳಿಗೆ ಶಿಕ್ಷೆಯಲ್ಲ, ಮಾರ್ಗದರ್ಶನ ನೀಡಿ: ಪ್ರಧಾನಿ ಮೋದಿ ವೀಡಿಯೊ ಸಂದೇಶ – vishwanews24

ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply