ಮೇ 2ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಮೇ 2ಕ್ಕೆ ನಿರೀಕ್ಷಿಸಬಹುದು ಎಂದು ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪರೀಕ್ಷಾ ಮಂಡಳಿಯ ನಿರ್ಧೇಶಕಿ ಸುಮಂಗಲ ಮೇ 2 ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ಅಂದು ಬೆಳಗ್ಗೆ ಪರಿಕ್ಷಾ ಮಂಡಳಿಯ ಇಲಾಖಾ ವೆಬ್‌ಸೈಟ್ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದ್ದು ಮರು ದಿವಸ ಅಂದ್ರೆ ಮೇ 3 ರಂದು ರಾಜ್ಯದ ಎಲ್ಲಾ ಪ್ರೌಢ ಶಾಲೆಗಳಲ್ಲಿ ಪ್ರಕಟ ಮಾಡಲಾಗುವುದು ಅಂತ ತಿಳಿಸಿದ್ದಾರೆ. ಇನ್ನು ಇದಲ್ಲದೇ ಇದೇ ಮೊದಲ ಬಾರಿಗೆ ಪಾಸಾಗಿರುವ ವಿದ್ಯಾರ್ಥಿಗಳ ಫೋಷಕರ ಮೊಬೈಲ್ ಗೆ ಸಂದೇಶ ಕೂಡ ರವಾನೆಯಾಗಲಿದೆ ಎನ್ನಲಾಗಿದೆ.

10ನೇ ತರಗತಿ ಪರೀಕ್ಷೆ ಫಲಿತಾಂಶವು ಪ್ರಕಟವಾಗುತ್ತಿದ್ದಂತೆ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ karresults.nic.inನಲ್ಲಿ ಕಾಣಿಸಲಿದೆ. ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಫಲಿತಾಂಶಗಳ ವೆಬ್‌ಸೈಟ್‌ ಮೂಲಕ ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.