ಮೇ 7ರಿಂದ 12ರ ವರೆಗೆ ದಕ, ಉಡುಪಿ ಜಿಲ್ಲೆಗಳಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24
ಮೇ 07ರಿಂದ 12ರ ವರೆಗೆ ದಕ, ಉಡುಪಿ ಜಿಲ್ಲೆಗಳಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ07ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಇಂದು ಮಳೆಯಾಗಲಿದೆ.
ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು ಚಿತ್ರದುರ್ಗದಲ್ಲಿ ಮೇ 8ರ ಬಳಿಕ ಮಳೆಯಾಗಲಿದೆ. ಭಾನುವಾರ ಚಾಮರಾಜನಗರದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 44.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಉಡುಪಿ: ವಾಟ್ಸಾಪ್ಗೆ ಬಂದ ಲಿಂಕ್ ಕ್ಲಿಕ್ ಮಾಡಿ 1.75 ಲಕ್ಷ ರೂ. ಕಳಕೊಂಡ ವ್ಯಕ್ತಿ – Vishwanews24
