ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು – vishwanews24
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು
ಬೆಂಗಳೂರು : ಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗಟ್ಟುವ ರಾಜ್ಯ ಸರಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ಅಲ್ಲದೆ, ರಾಜ್ಯಪಾಲರು ಹಲವು ಸ್ಪಷ್ಟನೆ ಕೇಳಿದ್ದಾರೆ.
“ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ ಹೇಗೆ ಹಾಕುತ್ತೀರಾ” ಎಂದು ರಾಜ್ಯಪಾಲರು ಸರಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಸುಗ್ರೀವಾಜ್ಞೆ ತಿರಸ್ಕರಿಸಲು ರಾಜ್ಯಪಾಲರ ಕಚೇರಿ ಕೊಟ್ಟ ಕಾರಣಗಳು ಹೀಗಿವೆ :
► ಸುಗ್ರೀವಾಜ್ಞೆಯಲ್ಲಿ ಹೇಳಲಾಗಿರುವ 10 ವರ್ಷಗಳ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಪರೀತವಾಗಿದೆ.
► ಈಗ ಚಾಲ್ತಿಯಲ್ಲಿರುವ ಕಾನೂನನ್ನು ಉಪಯೋಗಿಸಿಕೊಂಡು ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಿಸಬಹುದು.
► ಸುಗ್ರೀವಾಜ್ಞೆಯು ಮೈಕ್ರೊ ಫೈನಾನ್ಸ್ ಕಂಪನಿಗಳ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರಿಗೂ ತೊಂದರೆಯಾಗಲಿದೆ.
ಪೋಕ್ಸೋ ಪ್ರಕರಣ : ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ; ನಿರೀಕ್ಷಣಾ ಜಾಮೀನು ಮಂಜೂರು – vishwanews24
