ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ : ಕೃಷ್ಣಭೈರೆಗೌಡ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಶಿವಮೊಗ್ಗ: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೃಷ್ಣಭೈರೆಗೌಡ ಅವರು ಅಸಮಧಾನ ಹೊರಹಾಕಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರೋಷನ್ ಬೇಗ್​ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ರೋಷನ್ ಬೇಗ್​ ಅವಕಾಶವಾದಿ ರಾಜಕಾರಣಿ. ಅವರನ್ನು ಮಂತ್ರಿ ಮಾಡಿದ್ದರೆ ಎಲ್ಲವೂ ಸರಿಯಾಗಿ ಇರುತ್ತಿತ್ತು. ಮಂತ್ರಿ ಮಾಡದೇ ಇರುವುದರಿಂದ, ಬೇಗ ಈ ರೀತಿ ಹೇಳಿಕೆ ನೀಡಿದ್ದಾರೆ. ಇದು ಪಕ್ಷಕ್ಕೆ ಶೋಭೆ ತರುವಂತದ್ದಲ್ಲ. ಭಿನ್ನಾಭಿಪ್ರಾಯಗಳು ಸಹಜವಾಗಿದ್ದು, ಅವನ್ನು ಪಕ್ಷದೊಳಗೆ ಸರಿಪಡಿಸಿಕೊಳ್ಳಬೇಕು. ಬೀದಿಯಲ್ಲಿ ನಿಂತು ಮಾತನಾಡುವುದಲ್ಲ. ಅವರ ವಿರುದ್ಧದ ಶಿಸ್ತಿನ ಕ್ರಮ ಸರಿಯಾಗಿದೆ,” ಎಂದು ರೋಷನ್ ಬೇಗ್ ಅವರ ಅಮಾನತು ಕ್ರಮವನ್ನು ಸಚಿವರು ಸಮರ್ಥನೆ ಮಾಡಿಕೊಂಡರು