ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ
ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ ಕಂಬಳ ಆಯೋಜನೆಗೆ ಸಿದ್ಧತೆಗಳು ಆರಂಭಗೊಂಡಿದ್ದು, ಕಂಬಳ ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಬುಧವಾರ ಚಾಲನೆ ನೀಡಿದರು.
ಬುಧವಾರ ಭೂಮಿ ಪೂಜೆ ನೆರವೇರಿಸಿದ ಬಳಿಕ ಕಂಬಳ ಆಯೋಜನೆಗೆ ಅಗತ್ಯವಿರುವ ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಕಂಬಳ ಕ್ರೀಡೆಗೆ ಬೇಕಾಗುವ ಟ್ರ್ಯಾಕ್ ಹಾಗೂ ಇತರ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಕಂಬಳ ಆಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳು ಹಾಗೂ ಕಾಮಗಾರಿಗಳ ಕುರಿತು ಅಧಿಕಾರಿಗಳು ಮತ್ತು ಆಯೋಜಕರೊಂದಿಗೆ ಚರ್ಚೆ ನಡೆಸಲಾಯಿತು.
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ – vishwanews24
ರೈ ಎಸ್ಟೇಟ್ ಎಕ್ವಿಪ್ಮೆಂಟ್ಸ್ನಿಂದ ಬಾರಿಕೇಡ್, ಟೈಲ್ಸ್ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸಹಕಾರ ನೀಡಲಾಗುತ್ತಿದ್ದು, ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗಗಳ ಕಂಬಳ ಪರಂಪರೆಯನ್ನು ಮೈಸೂರಿನಲ್ಲಿ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಂಬಳದ ಮೂಲಕ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಹಾಗೂ ಸಂಸ್ಕೃತಿಯನ್ನು ಮೈಸೂರಿನಲ್ಲಿ ಮತ್ತಷ್ಟು ಜನಪ್ರಿಯಗೊಳಿಸುವ ನಿರೀಕ್ಷೆ ವ್ಯಕ್ತವಾಗಿದೆ.
