ಮೋದಿ ಅವರು ಕರ್ನಾಟಕದಲ್ಲಿ ಸ್ಪರ್ಧೆ ಮಾಡಲಿ : ಪ್ರಧಾನಿಗೆ ಸಿದ್ದರಾಮಯ್ಯ ಸವಾಲು – Vishwanews24

Featured

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿ, ಆವಾಗ ಗೊತ್ತಾಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಬಿಜೆಪಿಯನ್ನು ದೂರವಿಡುವ ಉದ್ದೇಶದಿಂದಲೇ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್​​-ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಮಣಿಸಲು ತಯಾರಿ ನಡೆಸುತ್ತಿದೆ. ಮೈತ್ರಿ ನಾಯಕರು ಆಪರೇಷನ್​ ಕಮಲ ವಿರೋಧಿಸಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ಧಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 22 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರು ಬರೀ ಸುಳ್ಳು ಹೇಳುತ್ತಾರೆ. ಭಾನುವಾರ ರಫೇಲ್ ಬಗ್ಗೆ ದೇಶದ ಚೌಕಿದಾರ ಮಾತಾಡಿಲ್ಲ. ರೈತರ ಸಾಲವನ್ನು ಅವರೇಕೆ ಮನ್ನಾ ಮಾಡಿಲ್ಲ ಎಂದು ಪ್ರಶ್ನಿಸಿದರು. ನಾವು ಈ ವರ್ಷದ ಬಜೆಟ್ ನಲ್ಲಿ ರೈತರ ಸಾಲಮನ್ನಾಕ್ಕೆ ಹಣ ಇಟ್ಟಿದ್ದೇವೆ. ಮೋದಿಯವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.