ಮೋದಿ ಗೆದ್ದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ : ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ – Vishwanews24

Featured, ರಾಷ್ಟ್ರ ನ್ಯೂಸ್

ಮೋದಿ ಗೆದ್ದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ : ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಹಜಾರಿಬಾಗ್ : ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೆದ್ದರೆ ಭವಿಷ್ಯದಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಜಾರ್ಖಂಡ್‌ ಹಜಾರಿಬಾಗ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇ ಶಿಸಿ ಮಾತನಾಡಿದ ಖರ್ಗೆ, ಮಾಜಿ ಸಿಎಂ ಹೇಮಂತ್ ಸೋರೆನ್ ಬಂಧನದ ಬಗ್ಗೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿ, ಅದಾನಿ ಮತ್ತು ಅಂಬಾನಿ ಅವರನ್ನು ಬಂಧಿಸಲು ಧೈರ್ಯ ತೋರಿ ಎಂದು ಸವಾಲು ಹಾಕಿದರು.

ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಪಶು ವೈದ್ಯನಿಂದ ಹಲ್ಲೆ  ; ವ್ಯಕ್ತಿ ಸ್ಥಳದಲ್ಲೇ ಸಾವು – Vishwanews24

ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಮತ್ತು ಜನರು ಅಪಾಯದಲ್ಲಿದ್ದಾರೆ. ನಿಮಗೆ ಮೂಲಭೂತ ಹಕ್ಕುಗಳಿಲ್ಲದಿದ್ದರೆ, ನೀವು ಗುಲಾಮರಾಗುತ್ತೀರಿ ಎಂದು ಕಿಡಿಕಾರಿದರು. ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದಿಂದ ಬಂಧನಕ್ಕೊಳಗಾಗಿದ್ದ ಇಂಡಿಯಾ ಮೈತ್ರಿಕೂಟದ ಎಲ್ಲ ನಾಯಕರನ್ನು ಮುಕ್ತಗೊಳಿಸಲಾಗುವುದು ಎಂದು ಖರ್ಗೆ ಭರವಸೆ ನೀಡಿದರು.

Leave a Reply