ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೂಕ್ತ ಸಂದರ್ಭದಲ್ಲಿ ಸಮರ್ಪಕ ನೀತಿ ಅನುಸರಿಸದ ಕಾರಣ ಭಯೋತ್ಪಾದನೆ ಹೆಚ್ಚಾಗುತ್ತಿದೆ : ದಿನೇಶ ಗುಂಡೂರಾವ್ – Vishwanews24
ಬೆಂಗಳೂರು :ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೂಕ್ತ ಸಂದರ್ಭದಲ್ಲಿ ಸಮರ್ಪಕ ನೀತಿ ಅನುಸರಿಸದ ಕಾರಣ ಭಯೋತ್ಪಾದನೆ ಹೆಚ್ಚಾಗುತ್ತಿದೆ ,ಕೇಂದ್ರದಲ್ಲಿ ಬಿಜೆಪಿ ಸರಕಾರವು ಆಡಳಿತ ನಡೆಸಲು ಪ್ರಾರಂಭಿಸಿದ ಬಳಿಕ ದೇಶದ ರಕ್ಷಣಾ ವ್ಯವಸ್ಥೆ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಸಮರ್ಪಕ ನೀತಿಯನ್ನು ಅಳವಡಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಆರೋಪ ಮಾಡಿದ್ದಾರೆ.
ಇಂದು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ನಾಲ್ಕು ವರ್ಷದಲ್ಲಿ ಜಮ್ಮುಕಾಶ್ಮಿರದಲ್ಲಿ ಭಯೋತ್ಪಾದನೆ ನಿಯಂತ್ರಣ ಮಾಡಲು ಕ್ರಮಕೈಗೊಳ್ಳಬಹುದಿತ್ತು. ಆದರೆ ವಿದೇಶ ಪ್ರವಾಸ ಮಾಡಿಕೊಂಡು ಕಾಲಹರಣ ಮಾಡಿದ್ದಾರೆ ಹೊರತು ದೇಶ ರಕ್ಷಣೆ ಮಾಡುವ ಸೈನಿಕರಿಗೆ ಸರ್ಕಾರದಿಂದ ಯಾವುದೇ ರಕ್ಷಣೆ ನೀಡಿಲ್ಲ’ ಎಂದು ಟೀಕಿಸಿದರು.
ಪಠಾಣ್ ಕೋಣ್, ಗುರುದಾಸ್ ಪುರ, ಉರಿ ಈಗ ಪುಲ್ವಾಮ ಘಟನೆಗಳು ಮರುಕಳಿಸಿರುವುದೇ ಇದಕ್ಕೆ ಸಾಕ್ಷಿ. ಇದು ಮರುಕಳಿಸದಂತೆ ಕೇಂದ್ರ ಸೂಕ್ತ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕರ ವಿರುದ್ಧ ದಿಟ್ಟ ಕ್ರಮ ತೆಗೆದುಕೊಂಡರೆ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದರು.

