ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ : ರಾಹುಲ್ ಗಾಂಧಿ ದೋಷಿ ಎಂದು ತೀರ್ಪು – Vishwanews24
ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ : ರಾಹುಲ್ ಗಾಂಧಿ ದೋಷಿ ಎಂದು ತೀರ್ಪು
2 ವರ್ಷ ಜೈಲು ಶಿಕ್ಷೆ – ಜಾಮೀನು ಪಡೆದ ರಾಹುಲ್ ಗಾಂಧಿ
30 ದಿನಗಳ ಜಾಮೀನು ಮಂಜೂರು
ಸೂರತ್: ನಗರದ ನ್ಯಾಯಾಲಯವು ಗುರುವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರ “ಮೋದಿ ಉಪನಾಮ” ಹೇಳಿಕೆಗಾಗಿ ದೋಷಿ ಎಂದು ತೀರ್ಪು ನೀಡಿದೆ.
ಐಪಿಸಿ ಸೆಕ್ಷನ್ 504 ರ ಅಡಿಯಲ್ಲಿ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಲಾಗಿದ್ದು ಈ ಸೆಕ್ಷನ್ ಅಡಿಯಲ್ಲಿ ಗರಿಷ್ಠ ಎರಡು ವರ್ಷಗಳ ಸಂಭವನೀಯ ಶಿಕ್ಷೆ ನೀಡಲಾಗುತ್ತದೆ.
“ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ?” ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಿಜೆಪಿ ಶಾಸಕ ಮತ್ತು ಗುಜರಾತ್ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಕ್ಷಾಲಾಗಿತ್ತು.
ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದ್ದು ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
