ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮೂಳೂರು ಕಡಲ ಕೊರೆತ ಪ್ರದೇಶಗಳಿಗೆ ತುರ್ತು ಸ್ಪಂದಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ: vishwanews24
ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮೂಳೂರು ಕಡಲ ಕೊರೆತ ಪ್ರದೇಶಗಳಿಗೆ ತುರ್ತು ಸ್ಪಂದಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ: vishwanews24
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರೆ, ಮೂಳೂರು, ಪೊಲಿಪು, ಉದ್ಯಾವರ ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಕಡಲ್ಕೊರೆತ ತೀವ್ರಗೊಂಡು ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದು ಹಲವಾರು ಮನೆಗಳು ಅಪಾಯದ ಅಂಚಿನಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಕಡಲ್ಕೊರೆತ ತಡೆಗೆ ತುರ್ತು ಕಾಮಗಾರಿ ನಡೆಸುವಂತೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಾದ ಡಾ. ಕೂರ್ಮ ರಾವ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಶೀಘ್ರದಲ್ಲೇ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಹಾಗೂ ತುರ್ತು ಕಾಮಗಾರಿಯನ್ನು ಆದ್ಯತೆಯ ಮೇಲೆ ನಡೆಸುವ ಬಗ್ಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಾಲಕೃಷ್ಣ ಕೋಟ್ಯಾನ್ ಕಾಪು, ಚಿತ್ತನ್ ಪೂಜಾರಿ ಮೂಳೂರು, ಅಶ್ವಿನ್ ಪುತ್ರನ್ ಪೊಲಿಪು ಮೊದಲಾದವರು ಉಪಸ್ಥಿತರಿದ್ದರು.

