ಯಾವುದೇ ಹಬ್ಬಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿಲ್ಲ : ಆರೋಗ್ಯ ಸಚಿವ – Vishwanews24

Featured, ರಾಜ್ಯ ನ್ಯೂಸ್

ಯಾವುದೇ ಹಬ್ಬಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿಲ್ಲ : ಆರೋಗ್ಯ ಸಚಿವ – Vishwanews24

ಬೆಂಗಳೂರು: ಕೊರೊನಾದ 4 ನೇ ಅಲೆ ಬರುವ ಬಗ್ಗೆ ಆತಂಕ ಎದುರಾಗಿದ್ದು, ರಾಜ್ಯ ಸರ್ಕಾರ ಹೊಸ ಕೊರೊನಾ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆದರೆ ಯಾವುದೇ ಹಬ್ಬಗಳಿಗೆ ನಿರ್ಬಂಧ ವಿಧಿಸಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದರು.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಸಭೆ ನಡೆಸಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ನಮ್ಮ ರಾಜ್ಯದಲ್ಲೂ ಕೊರೊನಾ 4 ನೇ ಅಲೆ ಬಗ್ಗೆ ವರದಿಯಾಗಿದೆ. ಅಂತರರಾಜ್ಯ ಪ್ರಯಾಣಿಕರ ಮೇಲೆ ನಿಗವಹಿಸಲಾಗುವುದು. ಹಬ್ಬ ಮಾಡಬೇಡಿ ಎಂದು ಯಾರೂ ಹೇಳುವುದಿಲ್ಲ. ಯಾವುದೇ ಹಬ್ಬಗಳಿಗೆ ರಾಜ್ಯ ಸರ್ಕಾರ ನಿರ್ಬಂಧಿ ವಿಧಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆ : ಯಾವುದೇ ಕಾರಣಕ್ಕೂ ಶಾಲೆಗಳನ್ನು ಕ್ಲೋಸ್ ಮಾಡಲ್ಲ : ಶಿಕ್ಷಣ ಸಚಿವ – Vishwanews24

Leave a Reply