ಯುವನಿಧಿ ಯೋಜನೆ: ಸ್ವಯಂ ಘೋಷಣೆ ಕಡ್ಡಾಯ – vishwanews24
ಯುವನಿಧಿ ಯೋಜನೆ: ಸ್ವಯಂ ಘೋಷಣೆ ಕಡ್ಡಾಯ
ಉಡುಪಿ : ೨೦೨೪-೨೫ ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಯಾವುದೇ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ ೩,೦೦೦ (ಪದವೀಧರ ನಿರುದ್ಯೋಗಿಗಳಿಗೆ) ಹಾಗೂ ೧,೫೦೦ (ಡಿಪ್ಲೋಮಾ ಪಡೆದ ನಿರುದ್ಯೋಗಿಗಳಿಗೆ) ನೇರ ನಗದು ಪಡೆಯುತ್ತಿದ್ದು, ಜಿಲ್ಲೆಯ ಫಲಾನುಭವಿಗಳು ತ್ರೆöÊಮಾಸಿಕದ ಬದಲಾಗಿ ಇನ್ನು ಮುಂದೆ ಪ್ರತಿ ತಿಂಗಳು ನವಂಬರ್ ೧ ರಿಂದ ೨೫ ರೊಳಗೆ ಕಡ್ಡಾಯವಾಗಿ ಆನ್ಲೈನ್ಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು.
ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲವಾದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಸ್ವಯಂ ಘೋಷಣೆ ನೀಡುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ಬಿ. ಬ್ಲಾಕ್ ರೂ ನಂಬರ್ ೨೦೧ ಮೊದಲನೆ ಮಹಡಿ ರಜತಾದ್ರಿ ಮಣಿಪಾಲ ಅಥವಾ ದೂ.ಸಂ: ೦೮೨೦- ೨೫೭೪೮೬೯ ಅನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
