ಯೂಥ್ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ : ಪಕ್ಷ ಸಂಘಟನೆ ಮಾಡುವ ಉತ್ತಮ ನಾಯಕನ ಆಯ್ಕೆಯಾಗಲಿ : ಡಿ.ಕೆ.ಶಿ -Vishwanews24

Featured, ರಾಜ್ಯ ನ್ಯೂಸ್

ಯೂಥ್ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ : ಪಕ್ಷ ಸಂಘಟನೆ ಮಾಡುವ ಉತ್ತಮ ನಾಯಕನ ಆಯ್ಕೆಯಾಗಲಿ : ಡಿ.ಕೆ.ಶಿ -Vishwanews24

ಬೆಂಗಳೂರುಯೂಥ್ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಪಾರದರ್ಶಕವಾಗಿ ನಡೆಯಲಿ. ಪಕ್ಷ ಸಂಘಟನೆ ಮಾಡುವ ಉತ್ತಮ ನಾಯಕನ ಆಯ್ಕೆಯಾಗಲಿ. ಈ ಚುನಾವಣೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ತಾಲೂಕುಮಟ್ಟದಿಂದ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದವರೆಗೂ ನಾಯಕರು ಬೆಳೆಯಬೇಕು ಎಂಬುದು ನಮ್ಮ ನಾಯಕರಾದ ರಾಜೀವ್ ಗಾಂಧಿ ಅವರ ಚಿಂತನೆ.

ಅದಕ್ಕಾಗಿ ಅವರು ಸಂವಿಧಾನ ತಿದ್ದುಪಡಿ ತಂದರು. ಹೀಗಾಗಿ ಯೂಥ್ ಕಾಂಗ್ರೆಸ್ ಚುನಾವಣೆ ನಡೆಯುತ್ತಿದೆ. ಪಾರದರ್ಶಕ ಹಾಗೂ ಮುಕ್ತವಾಗಿ ಚುನಾವಣೆ ನಡೆಯಬೇಕು. ಪಕ್ಷದ ಅಧ್ಯಕ್ಷನಾಗಿ ನಾನು ಯಾರ ಪರವಾಗಿ ನಿಲ್ಲುವುದಿಲ್ಲ. ಯಾರಿಗೂ ವಿರೋಧ ಮಾಡುವುದಿಲ್ಲ.‌ ಯಾರಿಗೆ ಆಸಕ್ತಿ ಇದೆಯೋ, ಯಾರು ಪಕ್ಷಕ್ಕೆ ಸಮಯ ಕೊಟ್ಟು ಸಂಘಟನೆಗೆ ಶ್ರಮಿಸುತ್ತಾರೋ ಅಂತಹವರನ್ನು ಆಯ್ಕೆ ಮಾಡಿ ಕಳುಹಿಸಿ ಎಂದು ಮತದಾರರಿಗೆ ಮನವಿ ಮಾಡುತ್ತೇನೆ ಎಂದರು.

ಮಂಗಳೂರಿನಲ್ಲಿ ಮಿಥುನ್ ರೈಗೆ ಹೆಚ್ಚಿನ ಜವಾಬ್ದಾರಿ ಇದೆ. ಹಿಂದೆ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ನಾನು ಅವರಿಗೆ ಯೂಥ್​ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸಲಹೆ ಕೊಟ್ಟೆ. ಬೇರೆಯವರಲ್ಲಿ ಸ್ಪರ್ಧಿಸುವ ಉತ್ಸಾಹ ಇತ್ತು. ಮಿಥುನ್ ನನ್ನ ಆಪ್ತ. ನನ್ನ ಹೆಸರಿಂದ ಒಬ್ಬರಿಗೆ ಅನುಕೂಲವಾಗಿ ಮತ್ತೊಬ್ಬರಿಗೆ ಹಿನ್ನಡೆಯಾಗುವುದು ಬೇಡ ಎಂದು ನಾನು ಸಲಹೆ ನೀಡಿದೆ ಎಂದರು.

http://ಬಿಜೆಪಿಯಿಂದ ಸ್ಥಿರವಾದ ಸರ್ಕಾರ ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಸ್ಥಿರ ಸರ್ಕಾರ ನೀಡಲು ಸಾಧ್ಯ : ಈಶ್ವರ್​ ಖಂಡ್ರೆ -Vishwanews24