ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ – Vishwanews24
ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೆಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಸದ್ಯ ಜೆಡಿಎಸ್ ಮತ್ತು ಬಿಜೆಪಿ ಕರ್ನಾಟಕದಲ್ಲಿ ಮೈತ್ರಿಯಾಗಿದ್ದು, ಈ ನಿಟ್ಟಿನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ನಿಖಿಲ್ ಕುಮಾರ್ ಸ್ವಾಮಿಯವರು ಭೇಟಿಯಾಗಿದ್ದಾರೆ.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ನಿಖಿಲ್ ಕುಮಾರಸ್ವಾಮಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು.ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ @myogiadityanath ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು.
ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು.ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.1/2 pic.twitter.com/aEIlGIdaSI— Nikhil Kumar (@Nikhil_Kumar_k) October 28, 2023
ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ… ಅಂತ ಹೇಳಿಕೊಂಡಿದ್ದಾರೆ.
ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪುತ್ರನ ಫೋಟೊ ವೈರಲ್; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ – Vishwanews24
