ರಮೇಶ್‌ ಜಾರಕಿಹೊಳಿ ಬೆಳಗಾವಿ ಲೋಕಸಭೆ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ : ಜಗದೀಶ್ ಶೆಟ್ಟರ್ -Vishwanews24

Featured, ರಾಜ್ಯ ನ್ಯೂಸ್

ರಮೇಶ್‌ ಜಾರಕಿಹೊಳಿ ಬೆಳಗಾವಿ ಲೋಕಸಭೆ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ : ಜಗದೀಶ್ ಶೆಟ್ಟರ್ -Vishwanews24

ಧಾರವಾಡ,: “ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭೆ ಉಪಚುನಾವಣೆಯ ಪ್ರಚಾರಕ್ಕೆ ಬರುತ್ತಾರೆ” ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಮೇಶ್‌ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭೆ ಚುನಾವಣೆಯ ಪ್ರಚಾರಕ್ಕೆ ಬರಲಿದ್ದಾರೆ. ಅಂಗಡಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಮಂಗಲಾ ಅವರು ನಾಲ್ಕು ಲಕ್ಷ ಮತಗಳಿಂದ ಜಯ ಗಳಿಸಲಿದ್ದಾರೆ” ಎಂದಿದ್ದಾರೆ.

ಚುನಾವಣೆ ಪ್ರಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯ ಹಿನ್ನೆಲೆ ಅವರಿಗೆ ಪ್ರಚಾರಕ್ಕೆ ಬರಲು ಆಗಿಲ್ಲ. ಈ ಬಗ್ಗೆ ಅವರೊಂದಿಗೆ ನಾನೇ ಮಾತನಾಡಿದ್ದು, ಬೆಳಗಾವಿ ಲೋಕಸಭೆ ಚುನಾವಣೆಯ ಪ್ರಚಾರಕ್ಕೆ ಬರುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ಮಂಗಳೂರು: ಬಬ್ಬುಸ್ವಾಮಿ ದೈವಸ್ಥಾನಕ್ಕೆ ಅಪವಿತ್ರ ಪ್ರಕರಣದ ಆರೋಪಿಗಳ ಉನ್ನತ ತನಿಖೆಗೆ ವಿಹೆಚ್ ಪಿ ಆಗ್ರಹ -Vishwanews24