ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ : ಪ್ರತಾಪ್ ಸಿಂಹ -Vishwanews24
ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ : ಪ್ರತಾಪ್ ಸಿಂಹ -Vishwanews24
ಮಡಿಕೇರಿ: ಡ್ರಗ್ಸ್ ದಂಧೆ ವಿಚಾರದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ.
ಕೊಡಗು ಜಿಲ್ಲೆಯ ಬಲಮುರಿಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ರಸ್ತೆ ಕಾಮಗಾರಿಗೆ ಪ್ರತಾಪ್ ಸಿಂಹ ಭೂಮಿ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪ್ರತಾಪ್ ಸಿಂಹ, ಚುನಾವಣೆ ಸಂದರ್ಭದಲ್ಲಿ ಸಿನಿಮಾ ತಾರೆಯರನ್ನು ಕರೆದುಕೊಂಡು ಬಂದು ಪ್ರಚಾರ ಮಾಡುವುದು ಸಾಮಾನ್ಯವಾಗಿದೆ. ಇದನ್ನು ಎಲ್ಲಾ ಪಕ್ಷಗಳು ಮಾಡಿವೆ. ಒಂದೇ ಚುನಾವಣೆಯಲ್ಲಿ ಸಿನಿಮಾ ತಾರೆಯರು ಮೂರು ಪಕ್ಷಗಳ ಕ್ಯಾಂಪೇನ್ ಮಾಡಿದ್ದಾರೆ ಎಂದರು.
ಕೆ.ಆರ್.ಪೇಟೆಯಲ್ಲಿ ಚುನಾವಣೆ ಸಂದರ್ಭದಲ್ಲಿ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದರು. ಈ ಹಿಂದೆ ರಾಗಿಣಿ ಕಾಂಗ್ರೆಸ್ ಮತ್ತು ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಈಗಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರ ಜೊತೆ ರಾಗಿಣಿ ಇರುವ ಫೋಟೋಗಳು ಇವೆ. ಹಾಗೆಂದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.
