ರಾಜಸ್ಥಾನ ರಾಜಕೀಯ : ವಿಶ್ವಾಸಮತ ಗೆದ್ದ ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರ -Vishwanews24

Featured, ರಾಷ್ಟ್ರ ನ್ಯೂಸ್

ಜೈಪುರ: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ವಿಶ್ವಾಸಮತ ಗೆದ್ದಿದೆ. ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡನೆ ಮಾಡಿತ್ತು.

ಶುಕ್ರವಾರ ರಾಜಸ್ಥಾನ ವಿಧಾನಸಭೆ ಕಲಾಪ ಆರಂಭವಾಗಿತ್ತು. ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಮೊದಲ ದಿನದ ಅಧಿವೇಶನದಲ್ಲಿಯೇ ಅವಿಶ್ವಾಸ ನಿರ್ಣಯವನ್ನು ಮಂಡನೆ ಮಾಡಿತ್ತು. ಆದರೆ, ಸರ್ಕಾರ ವಿಶ್ವಾಸಮತ ಗೆದ್ದಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್, “ಸರ್ಕಾರ ಬಹುಮತವನ್ನು ಗೆದ್ದಿದೆ. ಸರ್ಕಾರ ಬೀಳಿಸಲು ಪ್ರತಿಪಕ್ಷ ಮಾಡಿದ ಅನೇಕ ಪ್ರಯತ್ನಗಳು ವಿಫಲವಾಗಿವೆ. ಜನರೂ ಸಹ ಸರ್ಕಾರದ ಪರವಾಗಿದ್ದಾರೆ” ಎಂದರು.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್ ಬಂಡಾಯದ ಬಾವುಟ ಹಾರಿಸಿದ್ದರು. 18 ಶಾಸಕರು ಸಚಿನ್ ಪೈಲೆಟ್ ಜೊತೆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಉಂಟಾಗಿದ್ದ ಕಾರಣ ಪ್ರತಿಪಕ್ಷ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು.