ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಅವರಿಗೆ ನಿರ್ದೇಶನ ನೀಡುವಂತೆ ಸುಪ್ರೀಂ ಮೊರೆ ಹೋದ ಅತೃಪ್ತ ಶಾಸಕರು -Vishwanews24

Featured, ರಾಜ್ಯ ನ್ಯೂಸ್, ರಾಷ್ಟ್ರ ನ್ಯೂಸ್

ಮುಂಬೈ: ಮುಂಬೈನಲ್ಲಿರುವ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ನಮ್ಮ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಅವರಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ಮುಂಬೈನಲ್ಲಿರುವ 10 ಶಾಸಕರು ಅರ್ಜಿಯನ್ನು ಸಲ್ಲಿಸಿದ್ದಾರೆ. ಶನಿವಾರ ನಾವು ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇವೆ. ಆದರೆ ಇಲ್ಲಿಯವರೆಗೂ ರಾಜೀನಾಮೆ ಅಂಗೀಕಾರವಾಗಿಲ್ಲ. ಹೀಗಾಗಿ ರಾಜೀನಾಮೆಯನ್ನು ಅಂಗೀಕಾರ ಮಾಡುವಂತೆ ಸ್ಪೀಕರ್ ಅವರಿಗೆ ಸೂಚನೆ ನೀಡಬೇಕೆಂದು 10 ಶಾಸಕರು ಮನವಿ ಮಾಡಿದ್ದಾರೆ.

ರಾಜೀನಾಮೆ ಅಂಗೀಕಾರಕ್ಕೆ ವಿಧಾನಸಭಾ ಸ್ಪೀಕರ್‌ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಅತೃಪ್ತ ಶಾಸಕರ ಬಣ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಕ್ರಮಬದ್ಧವಾದ ರಾಜೀನಾಮೆಗಳನ್ನು ಕೂಡಾ ಸ್ಪೀಕರ್ ರಮೇಶ್ ಕುಮಾರ್ ಅವರು ಅಂಗೀಕರಿಸಿಲ್ಲ, ಉಳಿದ ರಾಜೀನಾಮೆಗಳನ್ನು ತಿರಸ್ಕರಿಸಲು ಸೂಕ್ತ ಕಾರಣ ಕೂಡಾ ನೀಡದೆ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಆರೋಪಿಸಿ ರಮೇಶ್ ಕುಮಾರ್ ವಿರುದ್ಧ ಅತೃಪ್ತ ಶಾಸಕರು, ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಗುರುವಾರ(ಜುಲೈ 11) ಅರ್ಜಿ ವಿಚಾರಣೆಗೆ ಬರಲಿದೆ. ಅತೃಪ್ತರ ಪರ ಮುಕುಲ್ ರೋಹ್ಟಗಿ ಅವರು ವಾದಿಸಲಿದ್ದಾರೆ.