ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್ಕೆ ಪಾಟೀಲ್ ರಾಜೀನಾಮೆ : Vishwanews24
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಹೆಚ್.ಕೆ ಪಾಟೀಲ್ ಎಐಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯ ಖಾಸಗಿ ಹೊಟೇಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದ ಮತದಾರರಿಗೆ ಧನ್ಯವಾದಗಳು. ಜನ ಏನು ತೀರ್ಪು ಕೊಟ್ಟಿದ್ದಾರೆ ಅದಕ್ಕೆ ನಾವು ತಲೆಬಾಗುತ್ತೇವೆ. ಈ ಫಲಿತಾಂಶದಿಂದ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಪಕ್ಷವನ್ನು ಸಂಘಟನೆ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಈ ರೀತಿಯಲ್ಲಿ ಸೋಲಿಗೆ ಮೈತ್ರಿ ಮಾಡಿಕೊಂಡದ್ದು ಒಂದು ಕಾರಣ ಇರಬಹುದು. ಆದರೆ ಅದೇ ಮುಖ್ಯ ಕಾರಣ ಅಲ್ಲ. ಈ ಸೋಲು ರಾಜ್ಯ ಸರ್ಕಾರದ ಮೇಲೆ ಪ್ರಭಾವ ಬೀರುತ್ತದೆ. ಅದನ್ನು ನಮ್ಮ ಹಿರಿಯ ನಾಯಕರು ಸಮರ್ಥವಾಗಿ ನಿಭಾಯಿಸಬೇಕು ಎಂದು ಹೇಳಿದರು.
