ರಾಜ್ಯ ಬಜೆಟ್‌ 2026 : ಮದ್ಯ ಪ್ರಿಯರಿಗೆ ಬಿಗ್​​ ಶಾಕ್​​ ನೀಡಿದ ಸಿದ್ದರಾಮಯ್ಯ – vishwanews24

Featured, ರಾಜ್ಯ ನ್ಯೂಸ್

ರಾಜ್ಯ ಬಜೆಟ್‌ 2026 : ಮದ್ಯ ಪ್ರಿಯರಿಗೆ ಬಿಗ್​​ ಶಾಕ್​​ ನೀಡಿದ ಸಿದ್ದರಾಮಯ್ಯ

ಬೆಂಗಳೂರು :17ನೇ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖೆಯ ಆದಾಯ ಹೆಚ್ಚಿಸಲು ಹೊಸ ತಂತ್ರವನ್ನು ರೂಪಿಸಿದ್ದಾರೆ.

ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಅಥವಾ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ವಿಧಿಸಲು ಸರ್ಕಾರ ತೀರ್ಮಾನಿಸಿದೆ.

ಇದನ್ನೂ ಓದಿ:

ರಾಜ್ಯ ಬಜೆಟ್‌ 2026: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ – vishwanews24

ರಾಜ್ಯಾದ್ಯಂತ ಏಕರೂಪದ ಅಬಕಾರಿ ಸುಂಕವನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಎಕ್ಸ್-ಫ್ಯಾಕ್ಟರಿ ದರಪಟ್ಟಿಯ ಆಧಾರದ ಮೇಲೆ ತೆರಿಗೆಯನ್ನು ಲೆಕ್ಕ ಹಾಕಲಾಗುತ್ತದೆ. ಮದ್ಯದ ಬೆಲೆಯನ್ನು ಒಂದೇ ಬಾರಿಗೆ ಏರಿಸುವ ಬದಲು ಹಂತಹಂತವಾಗಿ ಹೆಚ್ಚಿಸಲು ಸರ್ಕಾರ ಯೋಜನೆ ರೂಪಿಸಿದೆ.

ಕಳೆದ ವರ್ಷ ಫೆಬ್ರವರಿ ಅಂತ್ಯದವರೆಗೆ ಅಬಕಾರಿ ಇಲಾಖೆಯಿಂದ 36,492 ಕೋಟಿ ರೂ. ರಾಜಸ್ವ ಸಂಗ್ರಹವಾಗಿತ್ತು (12.7% ಬೆಳವಣಿಗೆ). ಆದರೆ, 2026-27ನೇ ಸಾಲಿಗೆ ಬರೋಬ್ಬರಿ 45,000 ಕೋಟಿ ರೂ. ಸಂಗ್ರಹಿಸುವ ಗುರಿ ಸರ್ಕಾರದಾಗಿದೆ.

ಇದನ್ನೂ ಓದಿ:

ರಾಜ್ಯ ಬಜೆಟ್‌ 2026: ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆ : ಸಿಎಂ ಘೋಷಣೆ – vishwanews24

 

Leave a Reply